ಶಿವಮೊಗ್ಗ(Shivamogga): ನಿಷೇಧಿತ ಭಯೋತ್ಪಾದನೆ ಸಂಘಟನೆ ಐಸಿಸ್ (ISIS) ಜೊತೆ ನಂಟು ಹೊಂದಿರುವ ಆರೋಪದ ಮೇಲೆ ಗ್ರಾಮೀಣ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಸಿದ್ದೇಶ್ವರ ನಗರ ನಿವಾಸಿ ಸಯ್ಯದ್ ಯಾಸೀನ್ ಅಲಿಯಾಸ್ ಬೈಲು (21) ಹಾಗೂ ಮಂಗಳೂರಿನ ಮಾಝ್ ಮುನೀರ್ ಅಹಮದ್ (22) ಬಂಧಿತರು. ತೀರ್ಥಹಳ್ಳಿಯ ಸೊಪ್ಪುಗುಡ್ಡೆಯ ನಿವಾಸಿ ಶಾರಿಕ್ ತಲೆಮರೆಸಿಕೊಂಡ ಆರೋಪಿ.
ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ಚಾಕು ಇರಿತ ಪ್ರಕರಣದ ವಿಚಾರಣೆ ವೇಳೆ ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದ್ದು, ಯುಎಪಿಎ (UNLAWFUL ACTIVITIES (PREVENTION) ACT) ಕಾಯ್ದೆಯಡಿ ಬಂಧಿಸಲಾಗಿದೆ.
ಇಬ್ಬರನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಸೆ. 29 ರವರೆಗೆ ಹೆಚ್ಚಿನ ವಿಚಾರಣೆಗೆ ನ್ಯಾಯಾಲಯ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಮಾಧ್ಯಮದವರಿಗೆ ಮಾಹಿತಿ ನೀಡಿದರು.