ಮನೆ ರಾಜಕೀಯ ಶಿಕ್ಷಕರಿಗೆ ಗುರುತಿನ ಚೀಟಿ ವಿತರಣೆ ಕಾರ್ಯ ಶ್ಲಾಘನೀಯ: ಸಚಿವ ಕೆ.ಗೋಪಾಲಯ್ಯ

ಶಿಕ್ಷಕರಿಗೆ ಗುರುತಿನ ಚೀಟಿ ವಿತರಣೆ ಕಾರ್ಯ ಶ್ಲಾಘನೀಯ: ಸಚಿವ ಕೆ.ಗೋಪಾಲಯ್ಯ

0

ಬೆಂಗಳೂರು: ಶಿಕ್ಷಕರಿಗೆ ಗುರುತಿನ‌ ಚೀಟಿಗಳನ್ನು ನೀಡುವ ಕಾರ್ಯಕ್ರಮ ಶ್ಲಾಘನೀಯವಾದುದು ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವೃಷಭಾವತಿ ನಗರದ ವಾರ್ಡ್ 102 ರ‌ ಎನ್ ಜಿ ಒಸ್ ಕಾಲೋನಿಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರಿಗೆ ಗುರುತಿನ ಚೀಟಿ ವಿತರಿಸುವ ಕಾರ್ಯಕ್ರಮಕ್ಕೆ  ಚಾಲನೆ ನೀಡಿ ಅವರು ಮಾತನಾಡಿದರು.

ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಭಾಗದಲ್ಲಿ 1800 ಶಿಕ್ಷಕರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಗುತ್ತಿದ್ದು, ಶಿಕ್ಷಕರು ಇದರ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಉಪಮೇಯರ್ ಹೇಮಲತಾ ಕೆ.ಗೋಪಾಲಯ್ಯ ಬಿಜೆಪಿ ಜಿಲ್ಲಾ ಉತ್ತರ ಘಟಕದ ಉಪಾಧ್ಯಕ್ಷ ಜಯರಾಮಯ್ಯ ಮಾಜಿ ಉಪಸಭಾಪತಿ ಪುಟ್ಟಣ್ಣ, ವೆಂಕಟೇಶ್ ,ಶ್ರೀನಿವಾಸ್ ,ಹಾಗೂ ಉತ್ತರ ವಲಯ ಕ್ಷೇತ್ರಶಿಕ್ಷಣಾಧಿಕಾರಿಗಳು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು