ಮನೆ ಅಪರಾಧ ಉದ್ಯಮಿ, ಕಾಂಗ್ರೆಸ್ ಮುಖಂಡ ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ

ಉದ್ಯಮಿ, ಕಾಂಗ್ರೆಸ್ ಮುಖಂಡ ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ

0

ಬೆಂಗಳೂರು(Bengaluru):  ಉದ್ಯಮಿ, ಕಾಂಗ್ರೆಸ್ ಮುಖಂಡ ಕೆಜಿಎಫ್ ಬಾಬು ನಿವಾಸದ ಮೇಲೆ  ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಇಂದು ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಶನಿವಾರ ಬೆಳಗ್ಗೆ ನಾಲ್ಕು ಇನೋವಾ ಕಾರಿನಲ್ಲಿ ಬಂದ ಐಟಿ ಅಧಿಕಾರಿಗಳು ವಸಂತನಗರದಲ್ಲಿರುವ ಕೆಜಿಎಫ್​ ಬಾಬು ಒಡೆತನದ ರುಕ್ಸಾನ ಪ್ಯಾಲೇಸ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ  ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಕೆಜಿಎಫ್ ಬಾಬು ಸ್ಪರ್ಧಿಸಿ ಪರಾಭವಗೊಂಡಿದ್ದರು.  ಈ ನಡುವೆ 2023 ರ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಲು ಕೆಜಿಎಫ್ ಬಾಬು ಸಿದ್ದತೆ ನಡೆಸಿದ್ದರು ಎನ್ನಲಾಗಿದೆ.

ಹಿಂದಿನ ಲೇಖನಮಸೀದಿ ಆವರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಕೋರಿ ಕೋರ್ಟ್‌ ಗೆ ಮೂರು  ಅರ್ಜಿ ಸಲ್ಲಿಕೆ
ಮುಂದಿನ ಲೇಖನಹಿಟ್ ಅಂಡ್ ರನ್ ಪ್ರಕರಣ: ಇಬ್ಬರು ಸವಾರರು ಸ್ಥಳದಲ್ಲೇ ಸಾವು