ಮನೆ ಆರೋಗ್ಯ ಕೋವಿಶೀಲ್ಡ್​ ಪಡೆದವರು ತಂಪುಪಾನಿಯ, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ: ಆರೋಗ್ಯ ಇಲಾಖೆ

ಕೋವಿಶೀಲ್ಡ್​ ಪಡೆದವರು ತಂಪುಪಾನಿಯ, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ: ಆರೋಗ್ಯ ಇಲಾಖೆ

0

ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದವರು ಫ್ರಿಜ್​ ನೀರು, ಐಸ್​ ಕ್ರೀಮ್​ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂಬುವುದು ಸುಳ್ಳು ಸುದ್ದಿಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Join Our Whatsapp Group

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ರೀತಿಯ ಸುದ್ದಿ ಸುಳ್ಳಾಗಿದ್ದು, ಇಂತಹ ಯಾವುದೇ ಸುತ್ತೋಲೆ ಇಲಾಖೆ ಹೊರಡಿಸಿಲ್ಲ. ಗಾಬರಿ ಗೊಳ್ಳದಿರಿ, ತಪ್ಪು ಮಾಹಿತಿ ಬಗ್ಗೆ ಜಾಗೃತಿ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈ ರೀತಿ ಸೂಚನೆ ನೀಡಿರುವ ಕಾಲೇಜುಗಳಿಗೆ ಕಾರಣ ಕೇಳಿ ಆರೋಗ್ಯ ಇಲಾಖೆ ನೋಟಿಸ್ ನೀಡಿದೆ.

ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿಯ ಪ್ರಕಾರ, ಎಲ್ಲ ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ರೀತಿಯ ಫ್ರಿಜ್​ ನೀರು, ಐಸ್​ ಕ್ರೀಮ್​ ಮತ್ತಯ ತಂಪು ಪಾನೀಯಗಳನ್ನು ಕುಡಿಯಬಾರದು. ಏಕೆಂದರೆ ಕೊರೊನಾ ಸಂದರ್ಭದಲ್ಲಿ ಕೋವಿಶೀಲ್ಡ್​​ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು ದಿಢೀರ್​ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುತ್ತಿದೆ. ಹೀಗಾಗಿ ಮೇಲೆ ತಿಳಿಸಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದು ಎಂದು ಖಾಸಗಿ ಕಾಲೇಜು ಸುತ್ತೋಲೆ ಹೊರಡಿಸಿತ್ತು.

ಖಾಸಗಿ ಕಾಲೇಜೊಂದು ಈ ರೀತಿಯಾಗಿ ನೋಟಿಸ್​ ಹೊರಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶುಕ್ರವಾರ ಹರದಾಡಲು ಆರಂಭಿಸಿತು. ಇದರಿಂದ ಎಚ್ಚತ್ತ ಆರೋಗ್ಯ ಇಲಾಖೆ ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದೆ.

ಕೋವಿಶೀಲ್ಡ್​ನಿಂದ ಅಡ್ಡ ಪರಿಣಾಮ

ಅಸ್ಟ್ರಾಜೆನೆಕಾ ಕೋವಿಡ್ ಲಸಿಕೆ ಪಡೆದ ಬಳಿಕ ಮೆದುಳು ಅಥವಾ ದೇಹದ ಇತರೆ ರಕ್ತನಾಳಗಳಲ್ಲಿ ರಕ್ತಹೆಪ್ಪುಗಟ್ಟುವುದು, ಪ್ಲೇಟ್ ಲೆಟ್​ಗಳ ಸಂಖ್ಯೆ ಕಡಿಮೆಯಾಗುವುದ ಬಗ್ಗೆ ಬ್ರಿಟನ್ ನಿವಾಸಿ ಜೆಮಿ ಸ್ಕಾಟ್​ ದೂರು ನೀಡಿದ್ದರು.

ಈ ಪ್ರಕರಣದ ವಿಚಾರಣೆ ವೇಳೆ ಆಸ್ಟ್ರಾಜೆನೆಕಾದ ವಕೀಲರು ಲಿಖಿತ ಹೇಳಿಕೆ ಸಲ್ಲಿಸಿದ್ದು ಅದರಲ್ಲಿ ಕಂಪನಿ ಅಭಿವೃದ್ಧಿಪಡಿಸಿರುವ ಲಸಿಕೆಯು ಅಪರೂಪದ ಪ್ರಕರಣಗಳಲ್ಲಿ ಅಡ್ಡಪರಿಣಾಮಗಳಿಗೆ ಕಾರಣವಾಗುವುದು ನಿಜ. ಲಸಿಕೆ ಪಡೆದವರು ಥ್ರೊಂಬೋಸಿಸ್‌ ಎಂಬ ಆರೋಗ್ಯ ಸಮಸ್ಯೆಗೆ ತುತ್ತಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಈ ಸಮಸ್ಯೆಗೆ ತುತ್ತಾದವರು ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್‌ಗಳ ಸಂಖ್ಯೆಯಲ್ಲಿ ಕಡಿಮೆಯ ತೊಂದರೆಗೆ ಒಳಗಾಗುತ್ತಾರೆ. ಅತ್ಯಂತ ಸೂಕ್ಷ್ಮ ಪ್ರಕರಣಗಳಲ್ಲಿ ವ್ಯಕ್ತಿಯು ಸಾವನ್ನಪ್ಪುವ ಸಾಧ್ಯತೆಯೂ ಇರುತ್ತದೆ’ ಎಂಬುದಾಗಿ ಸಂಸ್ಥೆ ತಪ್ಪೊಪ್ಪಿಕೊಂಡಿದೆ.

ಹಿಂದಿನ ಲೇಖನಮೋದಿ ಮೂರನೇ ಬಾರಿ ಪ್ರಧಾನಿಯಾಗಬೇಕು: ಕೆ ಎಸ್ ಈಶ್ವರಪ್ಪ
ಮುಂದಿನ ಲೇಖನಮೇ 8 ರಿಂದ ಎರಡು ದಿನಗಳ ಕಾಲ ಭಾರಿ ಮಳೆ: ಹವಾಮಾನ ಇಲಾಖೆ