ಮನೆ ಅಪರಾಧ ಬೆಂಗಳೂರಿನ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ 

ಬೆಂಗಳೂರಿನ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ 

0

ಬೆಂಗಳೂರು(Bengaluru): ಆದಾಯ ತೆರಿಗೆ ಮರೆಮಾಚಿದ ಆರೋಪದ ಮೇಲೆ ಬೆಂಗಳೂರಿನ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಗಳ ಮೇಲೆ ಅದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿರುವ ಕುರಿತು ಮಾಹಿತಿ ತಿಳಿದಬಂದಿದೆ.

ರೇವಾ ಮತ್ತು ದಿವ್ಯಾ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್‌ಗಳ ಮೇಲೆ ದಾಳಿ ನಡೆದಿದೆ ಎಂಬ ಮಾಹಿತಿ  ಲಭ್ಯವಾಗಿದೆ.

ಶುಲ್ಕ ವಸೂಲಿ ಸುಳ್ಳು ಲೆಕ್ಕ ತೋರಿಸಿ ತೆರಿಗೆ ವಂಚನೆ ಮಾಡಿದ ಆರೋಪವು ಕೂಡ ರೇವಾ ಹಾಗೂ ದಿವ್ಯಾ ಗ್ರೂಪ್‌ ಮೇಲೆ ಇದೆ. ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ ಸುಮಾರು 70 ವಾಹನಗಳಲ್ಲಿ ಅಧಿಕಾರಿಗಳು ಆಗಮಿಸಿ ದಾಳಿ ನಡೆಸಿದ್ದಾರೆ.

ಕರ್ನಾಟಕ ಹಾಗೂ ಗೋವಾ ವಲಯದ ಐಟಿ ಅಧಿಕಾರಿಗಳಿಂದ ಈ ದಾಳಿ ನಡೆದಿದೆ.

ಹಿಂದಿನ ಲೇಖನಭೀಕರ ರಸ್ತೆ ಅಪಘಾತ:  10 ಜನರ ಸಾವು, 7 ಮಂದಿ ಸ್ಥಿತಿ ಗಂಭೀರ
ಮುಂದಿನ ಲೇಖನಮಹದೇಶ್ವರ ಬೆಟ್ಟ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 48 ಜೋಡಿಗಳು