ಮನೆ ಕಾನೂನು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಸಹೋದರನ ಮನೆ ಮೇಲೆ ಐಟಿ ದಾಳಿ: 1 ಕೋಟಿ....

ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಸಹೋದರನ ಮನೆ ಮೇಲೆ ಐಟಿ ದಾಳಿ: 1 ಕೋಟಿ. ರೂ. ವಶ

0

ಬೆಂಗಳೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಸಹೋದರ ಕೆ.ಸುಬ್ರಹ್ಮಣ್ಯ ರೈ ಎಂಬುವವರ  ಮೈಸೂರಿನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Join Our Whatsapp Group

ದಾಳಿಯ ಸಂದರ್ಭದಲ್ಲಿ ಅವರ ಮನೆಯಂಗಳದಲ್ಲಿದ್ದ ಗಿಡದಲ್ಲಿ ನೇತು ಹಾಕಿದ್ದ ಒಂದು ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಖಚಿತ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮರದಲ್ಲಿ ನೇತು ಹಾಕಿದ್ದ ಹಣವನ್ನು ಐಟಿ ಅಧಿಕಾರಿಗಳು ವಶಪಡಿಸಿಕೊಂಡಿರುವ ಫೋಟೋಗಳು ಸದ್ಯ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಐಟಿ ದಾಳಿಗೆ ಒಳಗಾಗಿರುವ ಸುಬ್ರಹ್ಮಣ್ಯ ರೈ ಅವರು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಸಹೋದರ ಎಂದು ತಿಳಿದು ಬಂದಿದೆ.