ಮನೆ ರಾಜ್ಯ ಪ್ರತಿಷ್ಠಿತ ಪಿಇಎಸ್‌ ಶಿಕ್ಷಣ ಸಂಸ್ಥೆ ಸೇರಿ ಬೆಂಗಳೂರಿನ ಹಲವೆಡೆ ಐಟಿ ದಾಳಿ

ಪ್ರತಿಷ್ಠಿತ ಪಿಇಎಸ್‌ ಶಿಕ್ಷಣ ಸಂಸ್ಥೆ ಸೇರಿ ಬೆಂಗಳೂರಿನ ಹಲವೆಡೆ ಐಟಿ ದಾಳಿ

0

ಬೆಂಗಳೂರು : ಇಂದು ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಪಿಇಎಸ್‌ ಶಿಕ್ಷಣ ಸಂಸ್ಥೆ ಸೇರಿ ಹಲವೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

ಹೊಸಕೆರೆಹಳ್ಳಿ ಪಿಇಎಸ್ ಕಾಲೇಜು, ಎಲೆಕ್ಟ್ರಾನಿಕ್ ಸಿಟಿ ಕಾಲೇಜು, ಹನುಮಂತನಗರ ಕಾಲೇಜ, ಆಂಧ್ರದ ಕುಪ್ಪಂ ಕಾಲೇಜು ಸೇರಿದಂತೆ ಹಲವೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ಸುಮಾರು 6 ಗಂಟೆಗೆ ರಾಜ್ಯ ಹಾಗೂ ಹೊರ ರಾಜ್ಯದಲ್ಲಿರುವ ಪಿಇಎಸ್ ಶಿಕ್ಷಣ ಸಂಸ್ಥೆಯ ಶಾಖೆಗಳ ಮೇಲೆ ದಾಳಿ ನಡೆಸಲಾಗಿದೆ. ‌

ಬನಶಂಕರಿ ಬಿಡಿಎ ಕಾಂಪ್ಲೇಕ್ಸ್ ಬಳಿಯ ದೊರೆಸ್ವಾಮಿ ನಾಯ್ಡು ಮನೆ ಮೇಲೂ ದಾಳಿ ನಡೆದಿದೆ. ಬಳಿಕ ದೊರೆಸ್ವಾಮಿ ನಾಯ್ಡು ಅವರ ಸಂಬಂಧಿಕರು, ಉದ್ಯಮಿಗಳ ಮನೆಗಳ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ.

ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಇಂದು ಬೆಳಗ್ಗೆ 6 ಗಂಟೆಗೆ 100ಕ್ಕೂ ಹೆಚ್ಚು ಅಧಿಕಾರಿಗಳು ಏಕಕಾಲಕ್ಕೆ ವಿವಿಧೆಡೆ ದಾಳಿ ನಡೆಸಿದ್ದಾರೆ. ದಿವಂಗತ ದೊರೆಸ್ವಾಮಿ ನಾಯ್ಡು ಅವರು ಸ್ಥಾಪಿಸಿದ್ದ ಪಿಇಎಸ್‌ ಶಿಕ್ಷಣ ಸಂಸ್ಥೆಯನ್ನು ಅವರ ಪುತ್ರ ಜವಹರ್ ದೊರೆಸ್ವಾಮಿ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.