ಮೈಸೂರು(Mysuru): ಸ್ಯಾಂಟ್ರೋ ರವಿಯನ್ನು ಜನವರಿ 25ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಕೇಳಲು ಪೊಲೀಸರು ಇಂದು ಸ್ಯಾಂಟ್ರೋ ರವಿಯನ್ನು ಕೋರ್ಟ್’ಗೆ ಹಾಜರುಪಡಿಸಿದ್ದರು. ಸ್ಯಾಂಟ್ರೊ ರವಿ ಜೊತೆ ರಾಮ್ ಜಿ ಹಾಗೂ ಸುಚಿತ್ ರನ್ನು ಕೂಡ ಪೋಲಿಸರು ಕರೆ ತಂದಿದ್ದರು.
ಆದರೆ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ಮುಂದುವರಿಕೆ ಮಾಡಲಾಗಿದ್ದು, ಜನವರಿ 25ರಂದು ಮತ್ತೆ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಕೋರ್ಟ್ ಸೂಚನೆ ನೀಡಿದೆ.
ಮೈಸೂರಿನ 6ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಗುರುರಾಜ್ ಈ ಕುರಿತು ಆದೇಶ ಹೊರಡಿಸಿದ್ದು ಜನವರಿ 18ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದರು.
ಸ್ಯಾಂಟ್ರೋ ರವಿ ವಿರುದ್ಧ ಅತ್ಯಾಚಾರ, ಜಾತಿನಿಂದನೆ, ವಂಚನೆ ಆರೋಪವಿದೆ. ವರ್ಗಾವಣೆ ಸೇರಿದಂತೆ ಬೇರಾವುದೇ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲ. ಸ್ಯಾಂಟ್ರೋ ರವಿಗೆ ಬೆದರಿಕೆಯೂ ಇದೆ ಎಂದು ಸ್ಯಾಂಟ್ರೋ ರವಿ ಪರ ವಕೀಲರು ಮನವಿ ಮಾಡಿದರು.
ಮನವಿ ಪುರಸ್ಕರಿಸಿದ ನ್ಯಾಯಾಲಯ, ಜನವರಿ18 ರಂದು ತರಕಾರು ಅರ್ಜಿ ಸಲ್ಲಿಸಲು ಸರ್ಕಾರಿ ವಕೀಲರಿಗೆ ಸೂಚನೆ ನೀಡಿತು.