ನವದೆಹಲಿ(New Delhi): ಭಾರತದ 14 ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧನಕರ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಸ್ಪೀಕರ್ ಓಂ ಬಿರ್ಲಾ ಅವರು ಭಾಗವಹಿಸಿದ್ದರು.
ಧನಕರ್ ಅವರು ಭಾರತದ 14 ನೇ ಉಪ ರಾಷ್ಟ್ರಪತಿಯಾಗಿದ್ದಾರೆ. ಚುನಾವಣೆಯಲ್ಲಿ ಅವರು ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೆಟ್ ಆಳ್ವ ಅವರನ್ನು ಸೋಲಿಸಿ ಜಯ ಸಾಧಿಸಿದ್ದರು.