ಪವರ್ ಸ್ಟಾರ್’ ಪುನೀತ್ ರಾಜ್ಕುಮಾರ್ (Puneeth Rajkumar) ಅವರು ಹೀರೋ ಆಗಿ ನಟಿಸಿದ ಕೊನೇ ಸಿನಿಮಾ ‘ಜೇಮ್ಸ್’ ಸೂಪರ್ ಹಿಟ್ ಆಗಿದೆ. ನಾಲ್ಕು ದಿನಕ್ಕೆ 100 ಕೋಟಿ ರೂಪಾಯಿ ಗಳಿಸಿದ ಬಗ್ಗೆ ವರದಿ ಆಗಿತ್ತು. ಕಾರಣಾಂತರಗಳಿಂದ ಚಿತ್ರಮಂದಿರದಲ್ಲಿ ಈ ಸಿನಿಮಾ ಹೆಚ್ಚು ದಿನ ಪ್ರದರ್ಶನ ಕಂಡಿಲ್ಲ. ಥಿಯೇಟರ್ನಲ್ಲಿ ‘ಜೇಮ್ಸ್’ ಸಿನಿಮಾ (James Movie) ನೋಡಲು ಸಾಧ್ಯವಾಗದೇ ಇರುವವರು ಈಗ ಮನೆಯಲ್ಲೇ ಕುಳಿತು ವೀಕ್ಷಿಸಬಹುದು.
ಸೋನಿ ಲಿವ್ (Sony Liv) ಒಟಿಟಿ ಪ್ಲಾಟ್ಫಾರ್ಮ್ ಮೂಲಕ ಈ ಚಿತ್ರ ಪ್ರಸಾರ ಆಗಲಿದೆ. ಕನ್ನಡದ ಜೊತೆಗೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ವರ್ಷನ್ ಕೂಡ ಏ.14ರಿಂದ ವೀಕ್ಷಣೆಗೆ ಲಭ್ಯವಾಗಲಿದೆ ಎಂದು ಸೋನಿ ಲಿವ್ ಸಂಸ್ಥೆಯ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.
ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರಕ್ಕೆ ಕಿಶೋರ್ ಪತ್ತಿಕೊಂಡ ಬಂಡವಾಳ ಹೂಡಿದ್ದಾರೆ. ಪುನೀತ್ ರಾಜ್ಕುಮಾರ್ ಅವರಿಗೆ ಜೋಡಿಯಾಗಿ ಪ್ರಿಯಾ ಆನಂದ್ ನಟಿಸಿದ್ದಾರೆ. ಹಲವು ವಿಶೇಷತೆಗಳನ್ನು ಒಳಗೊಂಡ ಈ ಚಿತ್ರಕ್ಕೆ ಅಭಿಮಾನಿಗಳು ಮನಸೋತಿದ್ದಾರೆ. ಅಪ್ಪು ಅವರನ್ನು ಬಹುವಾಗಿ ಮಿಸ್ ಮಾಡಿಕೊಳ್ಳಲಾಗುತ್ತಿದೆ.
ಪುನೀತ್ ರಾಜ್ಕುಮಾರ್ ಅವರಿಗೆ ಎಲ್ಲ ರಾಜ್ಯಗಳಲ್ಲೂ ಅಭಿಮಾನಿಗಳಿದ್ದಾರೆ. ಆ ಕಾರಣಕ್ಕಾಗಿ ಹಲವು ಭಾಷೆಗಳಿಗೆ ಡಬ್ ಮಾಡಿ ‘ಜೇಮ್ಸ್’ ಚಿತ್ರವನ್ನು ಮಾ.17ರಂದು ಬಿಡುಗಡೆ ಮಾಡಲಾಗಿತ್ತು. ಈಗ ಒಟಿಟಿಯಲ್ಲೂ ಪ್ರೇಕ್ಷಕರು ಎಲ್ಲ ಭಾಷೆಯ ವರ್ಷನ್ನಲ್ಲಿ ಸಿನಿಮಾ ನೋಡಬಹುದು. ‘