ಮನೆ ಅಂತಾರಾಷ್ಟ್ರೀಯ ಜಮ್ಮು-ಕಾಶ್ಮೀರ: ಗುಂಡು ಹಾರಿಸಿಕೊಂಡು ಬಿಎಸ್ಎಫ್ ಯೋಧ ಆತ್ಮಹತ್ಯೆ

ಜಮ್ಮು-ಕಾಶ್ಮೀರ: ಗುಂಡು ಹಾರಿಸಿಕೊಂಡು ಬಿಎಸ್ಎಫ್ ಯೋಧ ಆತ್ಮಹತ್ಯೆ

0

ಜಮ್ಮು-ಕಾಶ್ಮೀರ(Jammukashmir): ಗಡಿ ಭದ್ರತಾ ಪಡೆಯ ಬಿಎಸ್ಎಫ್ ನಲ್ಲಿ ಸಬ್ ಇನ್ಸ್ ಪೆಕ್ಟರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಮ್ಮುವಿನ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ನಡೆದಿದೆ.

ರಾಜಸ್ಥಾನ ಮೂಲದವರಾದ ರಾಮದೇವ್ ಸಿಂಗ್ ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ.

ಇಂದು ಬೆಳಗ್ಗೆ 6.35ರ ಸುಮಾರಿಗೆ ಸಹೋದ್ಯೋಗಿಯೊಬ್ಬರು ರಾಮದೇವ್‌ ಅವರ ಕೊಠಡಿಗೆ ಹೋದಾಗ ಅಲ್ಲಿ ಗನ್ ಜೊತೆ ರಕ್ತದ ಮಡುವಿನಲ್ಲಿ ರಾಮದೇವ್ ರವರು ಸತ್ತು ಬಿದ್ದಿರುವುದು ಪತ್ತೆಯಾಗಿದೆ. ಮೃತ ಎಸ್‌ಐ 12ನೇ ಬೆಟಾಲಿಯನ್‌ಗೆ ಸೇರಿದವರಾಗಿದ್ದು, ಬಿಎಸ್‌ಎಫ್ ಪ್ಲೆಟೋನ್ ಒಂದನ್ನು ಮುನ್ನಡೆಸುತ್ತಿದ್ದರು. ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದಿನ ಲೇಖನಕಾರ್ಗಿಲ್ ವಿಜಯ್ ದಿವಸ್: ನಿವೃತ್ತ ಯೋಧರಿಗೆ ಸನ್ಮಾನ
ಮುಂದಿನ ಲೇಖನಶಾಹು ಮಹಾರಾಜ್, ಮಹಾತ್ಮ ಜ್ಯೋತಿಬಾ ಫುಲೆ ಕೃತಿಗಳನ್ನು ಜನರಿಗೆ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಿ: ಬಾಂಬೆ ಹೈಕೋರ್ಟ್