ಜಮ್ಮು(Jammu): ಮಿನಿ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 9 ಮಂದಿ ಮೃತಪಟ್ಟು, 27 ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.
ಈ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದು, 36 ಪ್ರಯಾಣಿಕರನ್ನು ಹೊತ್ತುಕೊಂಡು ಗಾಲಿ ಮೈದಾನದಿಂದ ಪೂಂಚ್‌ಗೆ ಸಂಚರಿಸುತ್ತಿದ್ದ ಬಸ್, ಸಾವ್‌ಜಿಯಾ ಗಡಿ ಪ್ರದೇಶದ ಬ್ರಾರಿ ನಾಲಾ ಬಳಿ ಕಂದಕಕ್ಕೆ ಉರುಳಿದೆ ಎಂದು ಹೇಳಿದ್ದಾರೆ.
ಭಾರತೀಯ ಸೇನೆ, ಪೊಲೀಸ್ ಪಡೆ ಹಾಗೂ ಸ್ಥಳೀಯರು ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬಸ್ ಅವಘಡಕ್ಕೆ ಸಂತಾಪ ಸೂಚಿಸಿರುವ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ.