ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನವರಿ 17 ರಂದು ಭಾರತ ಹಾಗೂ ಅಫ್ಘಾನಿಸ್ತಾನ ಟಿ20 ಹೊನಲು ಬೆಳಕಿನ ಪಂದ್ಯ ನಡೆಯಲಿದ್ದು, ಈ ಪಂದ್ಯ ವೀಕ್ಷಣೆಗೆ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಟಿಸಿ ಹೆಚ್ಚುವರಿ ಬಸ್ ಸೇವೆಯನ್ನು ಒದಗಿಸಲಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಿಂದ ನಗರದ 12 ಕಡೆಗಳಿಗೆ ಹೆಚ್ಚುವರಿ ಬಸ್ ಕಾರ್ಯಾಚರಣೆ ನಡೆಸಲಿವೆ. ಚಿನ್ನಸ್ವಾಮಿ ಕ್ರೀಡಾಂಗಣದಿಂದ ಕಾಡುಗೋಡಿ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್, ಕೆಂಗೇರಿ, ನೆಲಮಂಗಲ, ಯಲಹಂಕ 5ನೇ ಹಂತ 5ನೇ ಹಂತ, ಬಾಗಲೂರು, ಹೊಸಕೋಟೆಗೆ ಹೆಚ್ಚಿನ ಬಸ್ ವ್ಯವಸ್ಥೆ ಮಾಡಲಾಗಿದೆ.
ಮಾರ್ಗಸಂಖ್ಯೆ ಎಸ್ ಬಿಎಸ್ -1ಕೆ ಬಸ್ ಎಚ್ ಎಎಲ್ ಮಾರ್ಗವಾಗಿ ಕಾಡುಕೋಡಿ ತಲುಪಲಿದೆ. ಎಸ್ಬಿಎಸ್-13ಕೆ ನಂಬರಿನ ಬಸ್ ಹೂಡಿ ಮಾರ್ಗವಾಗಿ ಕಾಡುಗೋಡಿ ಬಸ್ ನಿಲ್ದಾಣ ತಲುಪಲಿದೆ. ಜಿ-2 ಬಸ್ ಅಗರ, ದೊಮ್ಮಸಂದ್ರ ಮಾರ್ಗವಾಗಿ ಸರ್ಜಾಪುರ, ಜಿ-3ಬಸ್ ಹೊಸೂರು ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ, ಜಿ-4 ಜಯದೇವ ಆಸ್ಪತ್ರೆ ಮಾರ್ಗವಾಗಿ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ತಲುಪಲಿದೆ ಎಂದು ಬಿಎಂಟಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
ಮೈಸೂರಿನ ವಾಸನ್ ಐ ಕೇರ್ ನ 14ನೇ ವಾರ್ಷಿಕೋತ್ಸವದ ಆಚರಣೆ
"ವಾಲ್ಮೀಕಿ ಅಭಿವೃದ್ಧಿ ನಿಗಮ" ದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.