ಮನೆ ಸ್ಥಳೀಯ ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಲು ಜನಸ್ಪಂದನ ಯೋಜನೆ: ಹೆಚ್ ಸಿ ಮಹದೇವಪ್ಪ

ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಲು ಜನಸ್ಪಂದನ ಯೋಜನೆ: ಹೆಚ್ ಸಿ ಮಹದೇವಪ್ಪ

0

ಮೈಸೂರು : ಮೂರು ತಿಂಗಳಿಗೆ ಒಂದು ಬಾರಿ ಕೆ . ಡಿ . ಪಿ ಸಭೆ ಹಾಗೂ 6 ತಿಂಗಳಿಗೆ ಒಂದು ಬಾರಿ ಜನತಾದರ್ಶನ ಕಾರ್ಯಕ್ರಮ ನಡೆಸಲಾಗುತ್ತಿದೆ . ಹಿಂದೆ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂದಿದ್ದ ಮನವಿಗಳಿಗೆ ಎಷ್ಟು ಪರಿಹಾರ ತಿಳಿಸಬೇಕು .​​ ಕಾನೂನು ತೊಡಕು ಇರುವ ಅರ್ಜಿಗಳ ಬಗ್ಗೆಯೂ ಅರ್ಜಿದಾರರಿಗೆ ಮಾಹಿತಿ ನೀಡಲಾಗಿದೆ . ಜನರಿಗೆ ಪಾರದರ್ಶಕ ಆಡಳಿತದ ಬಗ್ಗೆ ಮಾಹಿತಿ ನೀಡಲಾಗಿದೆ . ಜನರ ಸಮಸ್ಯೆಗಳನ್ನು ಪರಿಹರಿಸಿ ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ . ಹೆಚ್ . ಸಿ ಮಹದೇವಪ್ಪ ಅವರು ಹೇಳಿದರು .

ಇಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ‘ ಜಿಲ್ಲಾ ಮಟ್ಟದ ಜನಸ್ಪಂದನ ‘ ಹಾಗೂ ಇ – ಪೌತಿ ಆಂದೋಲನ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು ಇದೆ . 200 ಅಧಿಕ ಜನರ  ಅಹವಾಲು  ಸ್ವೀಕರಿಸಲಾಯಿತು .  ಕಳೆದ ಬಾರಿ 113 ಅರ್ಜಿಗಳು ಬಂದಿದ್ದವು .

ಯಾವ ಇಲಾಖೆಗಳಲ್ಲಿ ಏನೇ ಸಮಸ್ಯೆಗಳಿವೆ .​​​ ಎಷ್ಟು ಅರ್ಜಿಗಳಿಗೆ ಪರಿಹಾರ ನೀಡಲಾಗಿದೆ ,  ಮಾಡದೆ ಇರುವಂತಹ ಅರ್ಜಿಗಳಿಗೆ ಏನು ಪರಿಹಾರ ಎಂಬ ಎಲ್ಲಾ ಮಾಹಿತಿಯನ್ನು ಸಂಗ್ರಹಿಸಲಾಗಿದೆ . ಅರ್ಜಿದಾರರು ತಿಳಿಸಿರುವ ಸಮಸ್ಯೆಯನ್ನು ಪರಿಹರಿಸಲು ಆಡಳಿತ ಯಾವಾಗಲೂ ಜನರ ಜೊತೆಯೇ ಇರುತ್ತದೆ ಎಂದು ಹೇಳಿದರು .ಕಾನೂನಾತ್ಮಕವಾಗಿ ಪರಿಹಾರ ಮಾಡಲು ಸಾಧ್ಯವಾಗಿದೆ ಇರುವಂತಹ ಕಾರ್ಯಗಳ ಬಗ್ಗೆ ಮನವರಿಕೆ ಮಾಡಲು ಆಡಳಿತ ಜನರೊಂದಿಗೆ ಅವರ ಸಮಸ್ಯೆಗಳಿಗೆ​ ಸಹಕರಿಸಿ ಕೆಲಸ ಮಾಡಬೇಕು ಹಾಗೂ ನಿಮ್ಮ ಜೊತೆ ಕಚೇರಿಯ  ಸಮಸ್ಯೆ  ಪರಿಹರಿಸಲು ಸಹಾಯವಾಗುತ್ತದೆ .  ಜನರು ಮತ್ತು ಸಂಪರ್ಕ ನಡುವೆ ನೇರ ಸಂಪರ್ಕ ಇರುತ್ತದೆ . ಮಧ್ಯವರ್ತಿಗಳ ಹಾವಳಿಗಳನ್ನು ತಪ್ಪಿಸುವ ಸಲುವಾಗಿ ಪ್ರತಿ ಆರು ತಿಂಗಳಿಗೆ ಕಡ್ಡಾಯವಾಗಿ ಜನ ಸಂಪರ್ಕ ಸಭೆ ಆಯೋಜಿಸಲಾಗಿದೆ .​

ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸಿದ್ದ ನೂರಾರು ಜನರ ಸಮಸ್ಯೆ ಆಲಿಸಿದ ಸಚಿವರು ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದಾರೆ . ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಹುಡುಕಿದ ಸಚಿವರು , ಇನ್ನುಳಿದ ಅಹವಾಲುಗಳನ್ನು ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ . ಪ್ರತಿಯೊಬ್ಬರಿಂದಲೂ ಮನವಿ ಸ್ವೀಕರಿಸಿ ಅದನ್ನು ದಾಖಲು ಮಾಡಿಕೊಳ್ಳಲಾಯಿತು ಹಾಗೂ ಸಮಸ್ಯೆಗೆ ಪರಿಹಾರ ಕಲ್ಪಿಸುವ ಭರವಸೆ ನೀಡಲಾಯಿತು .

ಬೀದಿ ಬದಿ ವ್ಯಾಪಾರಿಗಳು , ಅಂಗವಿಕಲರು , ಕೂಲಿ ಕಾರ್ಮಿಕರು ಮನೆ ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ . ಅವರೆಲ್ಲರ ಅರ್ಜಿಯನ್ನು ಸಂಗ್ರಹಿಸಿದ್ದು , ಬಹು ವಸತಿ ಸೌಲಭ್ಯ ಒದಗಿಸಲು ಕ್ರಮವಹಿಸಲಾಗುವುದು . ಎಲ್ಲರಿಗೂ ಸೂರು ಒದಗಿಸಲು ಯೋಜನೆ ರೂಪಿಸುತ್ತೇವೆ . ಆರ್ಥಿಕವಾಗಿ ಹಿಂದುಳಿದ ಸೌಲಭ್ಯ ದೊರಕುತ್ತಿಲ್ಲ .​​ ಈ ರೀತಿ ಸಮಸ್ಯೆ ಇರುವವರನ್ನು  ವಿಚಾರಿಸಿ ಅಧಿಕಾರಿಗಳು ಅವರಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದರು .

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ . ಎನ್ . ಮಂಜೇಗೌಡ , ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹೆಚ್ . ಎಂ ರೇವಣ್ಣ , ಜಿಲ್ಲಾಧಿಕಾರಿಗಳಾದ ಜಿ . ಲಕ್ಷ್ಮಿಕಾಂತ ರೆಡ್ಡಿ , ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಯುಕೇಶ್ ಕುಮಾರ್ , ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್ . ವಿಷ್ಣುವರ್ಧನ್ , ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಶೇಖ್ ತನ್ವೀರ್ ಆಸಿಫ್ , ಅಪರ ಜಿಲ್ಲಾಧಿಕಾರಿಗಳಾದ ಡಾ . ಪಿ . ಶಿವರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.