ಮೈಸೂರು: ನವೆಂಬರ್ 29 ರಂದು ಬೆಳಗ್ಗೆ 11 ಗಂಟೆಗೆ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಶಿಕ್ಷಣ ಸಂಸ್ಥೆಯ ಆಡಿಟೋರಿಯಂ ನಲ್ಲಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪನವರು ವಹಿಸಲಿದ್ದು, ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














