ಮನೆ ರಾಜಕೀಯ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ: ಮಾಜಿ ಶಾಸಕ ಶಫಿ ಅಹಮದ್ ಜೆಡಿಎಸ್ ಗೆ ರಾಜೀನಾಮೆ

ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ: ಮಾಜಿ ಶಾಸಕ ಶಫಿ ಅಹಮದ್ ಜೆಡಿಎಸ್ ಗೆ ರಾಜೀನಾಮೆ

0

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಅಂಗವಾಗಿ ಜೆಡಿಎಸ್- ಬಿಜೆಪಿ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ಜೆಡಿಎಸ್​ ನಾಯಕರು ಒಬ್ಬೊಬ್ಬರಾಗಿಯೇ ಪಕ್ಷ ತೊರೆಯುತ್ತಿದ್ದಾರೆ.

Join Our Whatsapp Group

ತುಮಕೂರು ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ಪ್ರಬಲ ಮುಖಂಡ ಹಾಗೂ ಮಾಜಿ ಶಾಸಕ ಶಫಿ ಅಹಮದ್ ಬುಧವಾರ ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ಹಾಗೂ ರಾಜ್ಯಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿಯೊಂದಿಗಿನ ಪಕ್ಷದ ಮೈತ್ರಿಯನ್ನು ವಿರೋಧಿಸಿ ಬುಧವಾರ ಶಫಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರಿಗೆ ವಾಟ್ಸಾಪ್ ಮೂಲಕ ರವಾನಿಸಿದ್ದಾರೆ.

ಜೆಡಿಎಸ್ ಪಕ್ಷಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿರುವುದಾಗಿ ಅಹ್ಮದ್ ತಮ್ಮ ಎರಡು ಸಾಲಿನ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಫಿ ಅಹಮದ್ ಕಾಂಗ್ರೆಸ್ ​ಗೆ ಗುಡ್ ಬೈ ಹೇಳಿ ಜೆಡಿಎಸ್ ಸೇರಿದ್ದರು. ಇದೀಗ ಜೆಡಿಎಸ್​ ತೊರೆದು ವಾಪಸ್ ಕಾಂಗ್ರೆಸ್ ​ನತ್ತ ಮುಖ ಮಾಡುವ ಸಾಧ್ಯತೆ ಇದೆ. ಆದರೆ, ಕಾಂಗ್ರೆಸ್ ಸೇರುವ ಬಗ್ಗೆ ಅವರು ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಘೋಷಣೆಯಾದ ಬಳಿಕ ಅಸಮಾಧಾನಗೊಂಡಿರುವ ಜೆಡಿಎಸ್ ​ನ ಅಲ್ಪಸಂಖ್ಯಾತ ನಾಯಕರು ಮೊನ್ನೆಯಷ್ಟೇ ಸಭೆ ಮಾಡಿದ್ದು, ಸಾಮೂಹಿಕವಾಗಿ ಜೆಡಿಎಸ್​ ತೊರೆಯಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಇದೇ ವೇಳೆ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮೈತ್ರಿ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಕಳೆದ ಶನಿವಾರ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸೈಯದ್ ಶಫಿವುಲ್ಲಾ ಸಾಹೇಬ್ ಅವರು ಕೇಸರಿ ಪಕ್ಷದೊಂದಿಗಿನ ಮೈತ್ರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.