ಮನೆ ರಾಜ್ಯ ಜೆಡಿಎಸ್-ಬಿಜೆಪಿ ಮೈತ್ರಿಯಿಂದ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಲಾಭ: ಕ್ರಿಶನ್ ಪಾಲ್ ಗುರ್ಜರ್

ಜೆಡಿಎಸ್-ಬಿಜೆಪಿ ಮೈತ್ರಿಯಿಂದ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಲಾಭ: ಕ್ರಿಶನ್ ಪಾಲ್ ಗುರ್ಜರ್

0

ಮಂಡ್ಯ:ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ ಈವರೆಗೂ ಒಳ್ಳೆಯದೇ ಆಗಿದೆಯೇ ಹೊರತು ಕೆಟ್ಟದಾಗಿಲ್ಲ.ಅಂತೆಯೇ ದೇಶದಲ್ಲಿ ಕಾಂಗ್ರೆಸ್ ಸ್ಥಿತಿ ಏನಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ.ಕಾಂಗ್ರೆಸ್ ಜತೆ ಯಾವ ಪಕ್ಷದವರೂ ಕೂಡ ಸೇರುತ್ತಿಲ್ಲ.ಅದರಂತೆ ಏಕಾಂಗಿಯಾಗಿರುವುದರಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಎದುರಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಇಂಧನ ಮತ್ತು ಬೃಹತ್ ಕೈಗಾರಿಕಾ ಸಚಿವ ಕ್ರಿಶನ್ ಪಾಲ್ ಗುರ್ಜರ್ ಟೀಕಿಸಿದರು.


ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸೇರಿದಂತೆ ಇಡೀ ದೇಶಕ್ಕೆ ನರೇಂದ್ರ ಮೋದಿ ಅವರೇ ಗ್ಯಾರಂಟಿ. ಈ ಬಗ್ಗೆ ಜನರಲ್ಲಿ ವಿಶ್ವಾಸವಿದೆ. ಅಂತೆಯೇ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್(ಎನ್‌ಡಿಎ) ಮೈತ್ರಿಕೂಟ ಹೆಚ್ಚು ಸ್ಥಾನವನ್ನು ಗೆಲ್ಲಲಿದೆ. ಇನ್ನು ದೇಶದಲ್ಲಿ ಕೇವಲ ಮೋದಿ ಗ್ಯಾರಂಟಿ ನಡೆಯುತ್ತಿದೆಯೇ ಹೊರತು ಇನ್ಯಾವ ಗ್ಯಾರಂಟಿ ಕೂಡ ನಡೆಯುವುದಿಲ್ಲ. ಕರ್ನಾಟಕದಲ್ಲಿ 28 ಸ್ಥಾನವನ್ನು ಗೆಲ್ಲಲು ಈಗಾಗಲೇ ಟಾರ್ಗೆಟ್ ಮಾಡಿಕೊಂಡಿದ್ದೇವೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ, ಯಾರೂ ಮಿತ್ರರಲ್ಲ. ಸಮಯ ಸಂದರ್ಭದಲ್ಲಿ ಹೊಂದಾಣಿಕೆ ಮಾಡಿಕೊಂಡು ಹೋಗಬೇಕಾಗುತ್ತದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ ರಾಜ್ಯ ಮತ್ತು ದೇಶಕ್ಕೆ ಅನುಕೂಲವಾಗಲಿದೆ. ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ರಾಜಸ್ಥಾನ ಮತ್ತು ಮಧ್ಯಪ್ರದೇಶದ ಫಲಿತಾಂಶ ಕರ್ನಾಟಕದಲ್ಲೂ ಮರುಕಳಿಸಲಿದೆ. ಹರಿಯಾಣದಲ್ಲಿ 28 ಸೀಟುಗಳನ್ನು ಗೆದ್ದಂತೆ ಕರ್ನಾಟಕದಲ್ಲೂ ಕೂಡ 28ಕ್ಕೆ 28 ಅನ್ನು ಎನ್‌ಡಿಎ ಮೈತ್ರಿಕೂಟ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ.ಉಮೇಶ್, ರಾಜ್ಯಕಾರ್ಯಕಾರಣಿ ಸದಸ್ಯ ಡಾ.ಸಿದ್ದರಾಮಯ್ಯ, ಅಶೋಕ್ ಜಯರಾಂ, ಡಾ.ಎನ್.ಎಸ್.ಇಂದ್ರೇಶ್, ಪ.ನಾ.ಸುರೇಶ್, ಸಿ.ಟಿ.ಮಂಜುನಾಥ್ ಇದ್ದರು.

ಹಿಂದಿನ ಲೇಖನಬೂದನೂರು ಗ್ರಾ.ಪಂ. ಫಲಾನುಭವಿಗಳಿಗೆ ಕಿರುಕುಳ: ಧರಣಿ
ಮುಂದಿನ ಲೇಖನವಿದ್ಯಾರ್ಥಿನಿಯರ ಜತೆ ಅನುಚಿತ ವರ್ತನೆ: ಅನಪುರ ಶಾಲೆಯ ಹೆಡ್ ​ಮಾಸ್ಟರ್​ ಅಮಾನತು