ಮನೆ ರಾಜಕೀಯ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಮಂಡ್ಯದಲ್ಲಿ ಎಚ್‌.ಡಿ ಕುಮಾರಸ್ವಾಮಿ ಸ್ಪರ್ಧೆ

ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಮಂಡ್ಯದಲ್ಲಿ ಎಚ್‌.ಡಿ ಕುಮಾರಸ್ವಾಮಿ ಸ್ಪರ್ಧೆ

0

ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಜೆಡಿಎಸ್ ಕೊನೆಗೂ ಅಭ್ಯರ್ಥಿಗಳ ಆಯ್ಕೆ ಫೈನಲ್ ಮಾಡಿದ್ದು, ಕೋಲಾರ, ಮಂಡ್ಯ ಮತ್ತು ಹಾಸನ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಲೋಕಸಭೆ ಚುನಾವಣೆಯಲ್ಲಿ ಹಾಸನದಿಂದ ಪ್ರಜ್ವಲ್ ರೇವಣ್ಣ, ಮಂಡ್ಯದಿಂದ ಎಚ್.ಡಿ.ಕುಮಾರ ಸ್ವಾಮಿ ಹಾಗೂ ಕೋಲಾರದಿಂದ ಮಲ್ಲೇಶ ಬಾಬು ಜೆಡಿಎಸ್‌ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿದ್ದಾರೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ತಿಳಿಸಿದರು. ಜೆಡಿಎಸ್‌ನ ಹೃದಯ ಭಾಗ ಮಂಡ್ಯ. ಕಳೆದ ಚುನಾವಣೆ ನಮಗೆ ನೈತಿಕ ಸೋಲು ಅಲ್ಲ.ಈ ಚುನಾವಣೆ ಮೂಲಕ ಜೆಡಿಎಸ್ ಮುಗಿಸುತ್ತೇವೆ ಎನ್ನುವ ದುರಹಂಕಾರದ ಮಾತಿಗೆ ಚುನಾವಣೆಯಲ್ಲಿ ಉತ್ತರ ಕೊಡುತ್ತೇವೆ ಎಂದರು. ಬಹಳಷ್ಟು ಕುತೂಹಲ ಕೆರಳಿಸಿದ ಚಲನಚಿತ್ರ ನಟಿ ಸುಮಲತಾ ಪ್ರತಿನಿಧಿಸುತ್ತಿರುವ ಮಂಡ್ಯ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಠಕ್ಕರ್‌ ಕೊಡುವ ನಿಟ್ಟಿನಲ್ಲಿ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್‌ 28 ಕ್ಷೇತ್ರಗಳ ಫೈಕಿ ಬಿಜೆಪಿ 25 ಜೆಡಿಎಸ್‌ ಮೂರು ಕ್ಷೇತ್ರಗಳನ್ನ ಹಂಚಿಕೊಂಡಿದ್ದು, ಜೆಡಿಎಸ್‌ ಕೊನೆಗೂ ಅಭ್ಯರ್ಥಿಗಳ ಆಯ್ಕೆ ಫೈನಲ್ ಮಾಡಿದೆ.

ಹಿಂದಿನ ಲೇಖನವಿಶೇಷ ಚೇತನ ಮತದಾರರಿಗೂ ಬಂತು APP ಸೌಲಭ್ಯ
ಮುಂದಿನ ಲೇಖನಅಕ್ರಮ ಸಾಗಾಟ: ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಹಾಗೂ ಬಿಯರ್ ವಶ