ಮನೆ ರಾಜಕೀಯ ‌‌‌ಜೆಡಿಎಸ್‌ ಶಾಸಕ ಎಸ್‌.ಆರ್‌ ಶ್ರೀನಿವಾಸ್‌ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ?

‌‌‌ಜೆಡಿಎಸ್‌ ಶಾಸಕ ಎಸ್‌.ಆರ್‌ ಶ್ರೀನಿವಾಸ್‌ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ?

0

ಬೆಂಗಳೂರು: ಶಾಸಕ ಸ್ಥಾನಕ್ಕೆ ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕ ಎಸ್‌.ಆರ್‌ ಶ್ರೀನಿವಾಸ್‌ (ವಾಸು) ರಾಜೀನಾಮೆ ನೀಡಿದ್ದಾರೆ.

ಈ ಬಗ್ಗೆ ವಿಧಾನಸಭೆ ಸಭಾಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ಸ್ವ ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಜೆಡಿಎಸ್‌’ನಲ್ಲಿ ಅಸಮಾಧಾನಗೊಂಡಿರುವ ಅವರು, ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು.. ಪಕ್ಷ ತೊರೆಯುವ ಬಗ್ಗೆಯೂ ಹೇಳಿಕೊಂಡಿದ್ದರು.

ಈಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್‌ ಸೇರುವ ಸಾಧ್ಯತೆ ಇದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌’ನಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ.