ಮನೆ ರಾಜಕೀಯ ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

0

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಸಿಕ್ಕಿದ ಫಲಿತಾಂಶದ ಬಗ್ಗೆ ಆತ್ಮಾವಲೋಕನ ಸಭೆ ಹಾಗೂ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯೂ ನಾಳೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಇದೇ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

Join Our Whatsapp Group

ವಿಧಾನಸೌಧದಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಪಕ್ಷದಲ್ಲಿ ಮಾಡಬೇಕಿರುವ ಬದಲಾವಣೆಗಳು ಹಾಗೂ ತರಬೇಕಿರುವ ಸುಧಾರಣೆಗಳ ಬಗ್ಗೆ ಸಭೆಯಲ್ಲಿ ಮುಕ್ತವಾಗಿ ಚರ್ಚೆ ನಡೆಯಲಿದೆ. ಇದರಲ್ಲಿ ಯಾವ ಮುಚ್ಚುಮರೆ ಇಲ್ಲ. ದೊಡ್ಡ ನಿರೀಕ್ಷೆ ಇಟ್ಟುಕೊಂಡಿದ್ದೆವು. ಪಂಚರತ್ನ ರಥಯಾತ್ರೆಗೂ ದೊಡ್ಡ ಸಂಖ್ಯೆಯಲ್ಲಿ ಜನರು  ಸೇರಿದ್ದರು. ಆದರೆ, ಫಲಿತಾಂಶ ನಮಗೆ ಅತೀವ ನಿರಾಶೆ ಉಂಟು ಮಾಡಿದೆ ಎಂದರು ಅವರು.

ಆತ್ಮಾವಲೋಕನ ಸಭೆಯಲ್ಲಿ ಪಕ್ಷದ ಸಂಘಟನೆ ಬಗ್ಗೆ ಹೆಚ್ಚು ಒತ್ತು ಕೊಟ್ಟು ಚರ್ಚೆ ಮಾಡುತ್ತೇವೆ. ಕಾರ್ಯಕರ್ತರಲ್ಲಿ ವಿಶ್ವಾಸದ ಕೊರತೆ ಇದೆ. ಯುವಕರಿಗೆ, ಕಾರ್ಯಕರ್ತರಿಗೆ ಹೊಸ ಜವಾಬ್ದಾರಿ ಕೊಡಬೇಕು ಎಂಬ ಉದ್ದೇಶ ಇದೆ. ಪಕ್ಷದ ಸಂಘಟನೆ ದೃಷ್ಟಿಯಿಂದ ಕೆಲವು ಮಹತ್ವದ ಬದಲಾವಣೆ ಮಾಡಲಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ನವೆಂಬರ್ ನಲ್ಲಿ ರಾಜಕೀಯ ಬದಲಾವಣೆ ಆಗಲಿದೆ ಎಂಬ ಹೇಳಿಕೆ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ, ನಾನು ರಾಜಕೀಯದಲ್ಲಿ ಬೆಳವಣಿಗೆಗಳು ಆಗುತ್ತವೆ ಎಂದಿದ್ದೆ ಅಷ್ಟೇ‌. ಸರ್ಕಾರ ಹೋಗುತ್ತೆ ಅಂತಾ ಹೇಳಿದ್ದೆನಾ‌? ಎಂದು ಮರು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ನೂತನ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.

ಹಿಂದಿನ ಲೇಖನಟಾಸ್ ಗೆದ್ದ ಮುಂಬೈ: ಬ್ಯಾಟಿಂಗ್ ಆಯ್ಕೆ
ಮುಂದಿನ ಲೇಖನಲೋಕಾಯುಕ್ತ ಬಲೆಗೆ ಬಿದ್ದ ಬೇಲೂರು ಗ್ರಾ.ಪಂ.ಕಾರ್ಯದರ್ಶಿ