ಮೈಸೂರು(Mysuru): ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದವರೇ ಮೇಯರ್ ಆಗಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಸಿ. ಎನ್ ಮಂಜೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಮಾತುಕತೆಗೆ ಬಿಜೆಪಿ ಬದ್ದವಾಗಲಿದೆ. ಬಿಜೆಪಿಯವರು ಮಾತಿಗೆ ತಪ್ಪುವುದಿಲ್ಲ ಎಂಬ ಭರವಸೆ ನಮಗಿದೆ. ಒಂದು ವೇಳೆ ಮಾತಿಗೆ ತಪ್ಪಿದರೆ ರಾಜ್ಯದಲ್ಲಿ ಬಿಜೆಪಿಗೆ ಕೆಟ್ಟ ಸಂದೇಶ ರವಾನೆಯಾಗುತ್ತದೆ. ನಾವು ಮೇಯರ್ ಆಗ್ತೆವೆ, ಬಿಜೆಪಿಯವರು ಉಪ ಮೇಯರ್ ಆಗ್ತಾರೆ ಎಂದು ತಿಳಿಸಿದರು.
ಶಾಸಕ ಜಿಟಿ ದೇವೇಗೌಡ ಜೊತೆ ಹೆಚ್ ಡಿ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ. ಪಕ್ಷದ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಹೇಳಿದ್ದಾರೆ. ವಿಧಾನಪರಿಷತ್ ಸದಸ್ಯ ಮರೀತೀಬ್ಬೆಗೌಡ ಜೊತೆಗೂ ಕೂಡ ಮಾತುಕತೆ ನಡೆಸಲಿದ್ದೇವೆ. ನಮ್ಮ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಹೇಳುತ್ತೇವೆ ಎಂದರು.
Saval TV on YouTube