ತುಮಕೂರು: ಜೆಡಿಎಸ್ ಭವಿಷ್ಯದ ಬಗ್ಗೆ ಯಾರು ತಲೆ ಕೆಡಿಸಕೊಳ್ಳಬೇಕಾಗಿಲ್ಲ ಭದ್ರವಾಗಿದೆ ಸುಭದ್ರವಾಗಿದೆ ಅದು ಕಾರ್ಯಕರ್ತರ ಕೈಯಲ್ಲಿದೆ ಎಂದು ನಿಖಿಲ್ ಕುಮಾರಸ್ವಾಮಿ ವಿರೋಧಿಗಳಿಗೆ ಟಾಂಗ್ ನೀಡಿದರು.
ತುಮಕೂರಿನ ಚಿಕ್ಕನಾಯಕನಹಳ್ಳಿಯ ಬುಕ್ಕಾ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಎರಡನೇ ದಿನದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾಧ್ಯಮಗಳ ಜತೆ ಅವರು ಮಾತನಾಡಿದರು.
ನಮ್ಮ ಪಕ್ಷದಲ್ಲಿ ನಾಯಕರನ್ನ ಬೆಳಸುವಂತಹ ಕಾರ್ಯಕರ್ತರಿದ್ದಾರೆ. ಎಷ್ಟೋ ಜನ ದೊಡ್ಡ ದೊಡ್ಡ ನಾಯಕರು ನಮ್ಮ ಪಕ್ಷದಿಂದ ಬೆಳೆದು ಬೇರೆ ಪಕ್ಷಕ್ಕೆ ಹೋಗಿರುವ ಇತಿಹಾಸ ಇದೆ. ನಾಯಕರ ಫ್ಯಾಕ್ಟರಿಯನ್ನು ಸೃಷ್ಟಿ ಮಾಡುವ ಶಕ್ತಿ ನಮ್ಮ ಕಾರ್ಯಕರ್ತರಿಗಿದೆ ಎಂದು ಅವರು ತರಾಟೆಗೆ ತೆಗೆದುಕೊಂಡರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ಸಾಲಕ್ಕೆ ಸಿಲುಕಿದೆ ಎಂಬ ಮಾಧ್ಯಮದವರು ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದಾದರೂ ಉಪಚುನಾವಣೆ ಮತ್ತು ಎಂಪಿ ಚುನಾವಣೆ ಬರಲಿ ಅಂತ ಕಾಯ್ತಿದ್ದಾರೆ. ಆಗ ಗ್ಯಾರಂಟಿ ಹಣ ಹಾಕ್ತಾರೆ. ಅಭಿವೃದ್ಧಿ ಹೆಸರಿನಲ್ಲಿ ಕಾಂಗ್ರೆಸ್ ಲೂಟಿ ಹೊಡೆಯುತ್ತಿದೆ ಎಂದು ಅವರು ಕಿಡಿಕಾರಿದರು.
ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅವರ ಪ್ರಣಾಳಿಕೆಯಲ್ಲಿ ಗ್ಯಾರಂಟಿ ಯೋಜನೆಯನ್ನ ಪ್ರತಿ ತಿಂಗಳು ಕೊಡ್ತೀವಿ ಎಂದು ಮಾತು ಕೊಟ್ಟಿದ್ರು. ಇವತ್ತು ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ರಾಜ್ಯದ ಜನತೆಗೆ ಐದು ಗ್ಯಾರಂಟಿ ಯೋಜನೆ ಹೋಗ್ತಿಲ್ಲ ಎಂದು ಅವರು ಆರೋಪಿಸಿದರು.














