ಚಾಮರಾಜನಗರ: ರಿಲಯನ್ಸ್ ಜಿಯೋ ಟ್ರೂ 5ಜಿ ಈಗ ಚಾಮರಾಜನಗರ ಸೇರಿದಂತೆ ಕರ್ನಾಟಕದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ, 250ಕ್ಕೂ ಹೆಚ್ಚು ನಗರಗಳು ಮತ್ತು ಪಟ್ಟಣಗಳಲ್ಲಿ ಲಭ್ಯವಿದೆ.
ನಗರಗಳು ಮತ್ತು ಪಟ್ಟಣಗಳಿಗೆ ಹೊಂದಿ ಕೊಂಡಿರುವ ನೂರಾರು ಹಳ್ಳಿಗಳು ಸಹ ಈಗ ಜಿಯೋ ಟ್ರೂ 5ಜಿ ಪ್ರಯೋಜನಗಳನ್ನು ಪಡೆಯುವುದಕ್ಕೆ ಸಾಧ್ಯವಾಗುವುದು ಎಂದು ಜಿಯೋ ಕಂಪನಿ ಪ್ರಕಟಣೆ ತಿಳಿಸಿದೆ.
ಜಿಯೋ ಬಳಕೆದಾರರನ್ನು ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾ ಪಡೆಯಬಹುದಾಗಿದೆ.
ಪ್ರಮುಖ ಸ್ಥಳಗಳು, ಪ್ರವಾಸಿ ತಾಣಗಳು, ಶಿಕ್ಷಣ ಸಂಸ್ಥೆಗಳು, ಮಾಲ್ ಗಳು ಮತ್ತು, ವಸತಿ ಪ್ರದೇಶಗಳು, ಆಸ್ಪತ್ರೆಗಳು, ಹೋಟೆಲ್ ಗಳು ಮತ್ತು ರೆಸ್ಟೋರೆಂಟ್ ಗಳು, ಸರ್ಕಾರಿ ಕಟ್ಟಡಗಳು ಹಾಗೂ ವಾಣಿಜ್ಯ ಸಂಸ್ಥೆಗಳಲ್ಲೂ ಜಿಯೋ 5ಜಿ ಲಭ್ಯವಿದೆ ಎಂದು ಪ್ರಕಟಣೆ ನೀಡಿದೆ.
ಈ ಬಗ್ಗೆ ಮಾತನಾಡಿದ ಜಿಯೋ ವಕ್ತಾರರು, ಜಿಯೋ ಟ್ರೂ 5ಜಿ ಸೇವೆಗಳ ಲಭ್ಯತೆಯನ್ನು ಘೋಷಿಸಲು ಸಂತೋಷಪಡುತ್ತೇವೆ. ಶಿಕ್ಷಣ, ಆರೋಗ್ಯ, ಪ್ರವಾಸೋದ್ಯಮ, ಉತ್ಪಾದನೆ, ಎಸ್ ಎಂಇಗಳು, ಇ-ಆಡಳಿತ, ಕೃಷಿ, ಆಟೊಮೇಷನ್, ಕೃತಕ ಬುದ್ಧಿ ಮತ್ತೆ, ಗೇಮಿಂಗ್ ಮತ್ತು ಐಟಿ ಕ್ಷೇತ್ರಗಳ ಬೆಳವಣಿಗೆಗೆ ಜಿಯೋ 5ಜಿ ಪೂರಕವಾಗಿದೆ ಎಂದು ತಿಳಿಸಿದ್ದಾರೆ.
2023ರ ಡಿಸೆಂಬರ್ ಕೊನೆಯ ವೇಳೆಗೆ ದೇಶದ ಪ್ರತಿ ಪಟ್ಟಣ ಮತ್ತು ತಾಲೂಕುಗಳಲ್ಲಿ ತನ್ನ ಟ್ರೂ 5ಜಿ ಸೇವೆಗಳನ್ನು ಪ್ರಾರಂಭಿಸಲು ಜಿಯೋ ಯೋಜನೆ ಮಾಡಿದೆ .