ಮೈಸೂರು: ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರದ ಕಚೇರಿಯಲ್ಲಿ ಶ್ರೀಕ್ಷೇತ್ರ ಸುತ್ತೂರು ಶ್ರೀಮಠದ ಮಹಾಸಂಸ್ಥಾನಾಧೀಶರಾದ ಡಾ. ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಜನ್ಮದಿನ ಅಂಗವಾಗಿ 30ಕ್ಕೂ ಹೆಚ್ಚು ಭಕ್ತಾದಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡುವ ಮೂಲಕ ಶ್ರೀಗಳ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು
ನಂತರ ಮಾತನಾಡಿದ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ ಎಸ್ ಶ್ರೀವತ್ಸ ರವರು ಈಗಾಗಲೇ ಎರಡು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಮಾಡಿದರು ಅದರಂತೆ ನಾವು ಸಹ ಈ ಬಾರಿ ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಆಹ್ವಾನಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ರೇಣುಕಾ ರಾಜ್,ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಜೆಡಿಎಸ್ ಕಾರ್ಯಾಧ್ಯಕ್ಷ ಪ್ರಕಾಶ್ ಪ್ರಿಯದರ್ಶನ್, ಬಿಜೆಪಿ ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಲೋಹಿತ್, ಜಿ ರಾಘವೇಂದ್ರ, ಮಹೇಂದ್ರ ಶೈವ, ಪತ್ರಿಕೆಯಾದ ಮಧು ಕುಮಾರ್, ಸದಾಶಿವ, ರಶ್ಮಿ, ರಘು,ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ಸಿಬ್ಬಂದಿ ವರ್ಗ ಹಾಜರಿದ್ದರು.