ಮನೆ ಉದ್ಯೋಗ ಜೆಎನ್’ಸಿಎಎಸ್’ಆರ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಪದವಿಧರರು ಅರ್ಜಿ ಸಲ್ಲಿಸಿ

ಜೆಎನ್’ಸಿಎಎಸ್’ಆರ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಪದವಿಧರರು ಅರ್ಜಿ ಸಲ್ಲಿಸಿ

0

ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಆಫೀಸ್ ಎಕ್ಸಿಕ್ಯೂಟಿವ್ ಹುದ್ದೆಗಳು ಖಾಲಿ ಇವೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಜನವರಿ 4, 2023 ಕ್ಕೆ ಮುನ್ನ ತಮ್ಮ ರೆಸ್ಯೂಮ್’ನ್ನು ಇ-ಮೇಲ್ ಮಾಡಿ.

ವಿದ್ಯಾರ್ಹತೆ:

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಅಭ್ಯರ್ಥಿಗಳ ವಯಸ್ಸು ಜನವರಿ 4, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಜೊತೆಗೆ ಮೀಸಲಾತಿಗನುಗುಣವಾಗಿ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ಆಫೀಸ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 30,000 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:

ಆಫೀಸ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಪ್ರಮುಖ ದಿನಾಂಕಗಳು:

ನೋಟಿಫಿಕೇಶನ್ ಬಿಡುಗಡೆ ದಿನಾಂಕ: 21/12/2022

ಇ-ಮೇಲ್ ಕಳುಹಿಸಲು ಕೊನೆಯ ದಿನ: 04/01/2023

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳು ಹಾಗೂ ರೆಸ್ಯೂಮ್ನೊಂದಿಗೆ ಇ-ಮೇಲ್ ಐಡಿ acoord@jncasr.ac.in ಗೆ ಜನವರಿ 4ರೊಳಗೆ ಕಳುಹಿಸಬೇಕು.

ಹಿಂದಿನ ಲೇಖನಡಿಪ್ಲೊಮಾ, ಪಾಲಿಟೆಕ್ನಿಕ್‌ ವಿದ್ಯಾರ್ಥಿಗಳಿಗೆ 5 ವರ್ಷದ ಎಲ್‌’ಎಲ್‌’ಬಿ ಕೋರ್ಸ್‌ಗೆ ಅನುಮತಿಸಿ: ಮದ್ರಾಸ್‌ ಹೈಕೋರ್ಟ್‌
ಮುಂದಿನ ಲೇಖನಕಾರು- ಬಸ್ ನಡುವೆ ಅಪಘಾತ: 10 ಮಂದಿ ದುರ್ಮರಣ