ಕೊಡಗು ಸೈನಿಕ ಶಾಲೆಯಲ್ಲಿ ವಿವಿಧ ಬೋಧಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಟಿಜಿಟಿ ಮತ್ತು ಕ್ರಾಫ್ಟ್ ವಿಷಯಗಳ ಬೋಧನೆಗೆ ಈ ನೇಮಕಾತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳನ್ನು ಪ್ರಸಕ್ತ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 15 ಆಗಿದೆ.
ಸಂಸ್ಥೆಯ ಹೆಸರು: ಸೈನಿಕ ಶಾಲೆ ಕೊಡಗು
ಹುದ್ದೆಯ ಹೆಸರು: ಟಿಜಿಟಿ, ಕ್ರಾಫ್ಟ್ ಬೋಧಕ
ಹುದ್ದೆಗಳ ಸಂಖ್ಯೆ: 5
ಉದ್ಯೋಗ ಸ್ಥಳ: ಕೊಡಗು – ಕರ್ನಾಟಕ
ವೇತನ: 30800-44900 ರೂ. ಪ್ರತಿ ತಿಂಗಳು
ಅರ್ಜಿ ಶುಲ್ಕ
ಟಿಜಿಟಿ (ಇಂಗ್ಲಿಷ್) ಹುದ್ದೆಗೆ: 500 ರೂ
ಪ.ಪಂ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಕ್ರಾಫ್ಟ್ ಬೋಧಕ, ಬ್ಯಾಂಡ್ ಮಾಸ್ಟರ್, ಕಚೇರಿ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ:
ಎಲ್ಲಾ ಇತರ ಅಭ್ಯರ್ಥಿಗಳು: 250 ರೂ.
ಪ.ಪಂ ಅಭ್ಯರ್ಥಿಗಳು: ಇಲ್ಲ
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್
ಅರ್ಜಿ ಸಲ್ಲಿಕೆ: ಆಫ್ಲೈನ್
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ಪ್ರಾತ್ಯಕ್ಷಿಕೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸುವ ವಿಳಾಸ
ಪ್ರಾಂಶುಪಾಲರು, ಸೈನಿಕ ಶಾಲೆ ಕೊಡಗು, ಅಂಚೆ: ಕೂಡಿಗೆ, ಕುಶಾಲನಗರ ತಾಲೂಕು, ಜಿಲ್ಲೆ. ಕೊಡಗು, ಕರ್ನಾಟಕ, ಪಿನ್ – 571232
ಪ್ರಮುಖ ದಿನಾಂಕಗಳು:
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18 ಸೆಪ್ಟೆಂಬರ್ 2022
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಅಕ್ಟೋಬರ್ 2022
ಅಧಿಕೃತ ವೆಬ್ಸೈಟ್: sainikschoolkodagu.edu.in
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ
ಅರ್ಜಿಯಲ್ಲಿ ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳ ಮಾಹಿತಿ ಭರ್ತಿ ಮಾಡಿ.
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಮೇಲಿನ ವಿಳಾಸಕ್ಕೆ ನಿಗದಿತ ದಿನಾಂಕಕ್ಕೆ ಮುನ್ನ ತಲಪುವಂತೆ ನೋಡಿಕೊಳ್ಳಿ