ಬೆಂಗಳೂರು: ಕರ್ನಾಟಕ ರಾಜ್ಯ ಹೈಕೋರ್ಟ್ ನಲ್ಲಿ ಖಾಲಿ ಇರುವ ಕೇಬಲ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ಹೈಕೋರ್ಟ್ ಪ್ರಕಟಣೆ ಹೊರಡಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಿಕಲ್/ಐಟಿ ಅಥವಾ ಎಸ್ ಎಸ್ ಎಲ್ ಸಿ ಯಲ್ಲಿ ಪಾಸ್ ಆಗಿರಬೇಕು.
ವಯೋಮಿತಿ: ಅಭ್ಯರ್ಥಿಗೆ ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 3 ವರ್ಷ ಮತ್ತು ಎಸ್ ಸಿ/ಎಸ್ ಟಿ/ಸಿಎಟಿ-I ಅಭ್ಯರ್ಥಿಗೆಳಿಗೆ 5 ವರ್ಷ ಸಡಿಲಿಕೆ ಇರಲಿದೆ.
ವೇತನ: ಅರ್ಜಿ ಶುಲ್ಕ ರೂ. 100 ರಿಂದ 200 ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಹಾಗೂ ಆಯ್ಕೆಯಾಗುವ ಅಭ್ಯರ್ಥಿಗೆ 63,200 ರೂ ವರೆಗೆ ವೇತನ ಪಾವತಿಸಲಾಗುತ್ತದೆ.
ಅರ್ಜಿಯನ್ನು ಆನ್ ಲೈನ್ ಮೂಲಕ ಇದೇ 2023ರ ಜುಲೈ 17ರೊಳಗೆ ಸಲ್ಲಿಸಬಹುದಾಗಿದೆ. ಮತ್ತು ಅರ್ಜಿ ಶುಲ್ಕ ಪಾವತಿಸಲು ಜುಲೈ 20 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಹೈಕೋರ್ಟ್ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಗೆ ಭೇಟಿ ನೀಡಿ. https://recruitmenthck.kar.nic.in/hck/gdc/home.php