ಬೆಂಗಳೂರು: ಕರ್ನಾಟಕದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಸಮಾಲೋಚಕರು, ಕೋ- ಆರ್ಡಿನೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿಶ್ವ ಬ್ಯಾಂಕ್ ನಿಧಿಯ ಕರ್ನಾಟಕ ಸುಸ್ಥಿರ ಗ್ರಾಮೀಣ ನೀರು ಪೂರೈಕೆ ಕಾರ್ಯಕ್ರಮಕ್ಕಾಗಿ ಈ ಹುದ್ದೆಗಳ ಭರ್ತಿ ನಡೆಸಲಾಗುವುದು. ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಈ ನೇಮಕಾತಿ ನಡೆಯಲಿದೆ.
ಉದ್ಯೋಗ ವಿವರ: ಒಟ್ಟು 47 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಹುದ್ದೆ ವಿವರ ಹೀಗಿದೆ.
ಪ್ರೊಕ್ಯೂರ್ಮೆಂಟ್ ಕನ್ಸಲ್ಟಂಟ್ – 9
ಮಾನಿಟರಿಂಗ್ ಅಂಡ್ ಎವಲ್ಯೂಷನ್ ಕನ್ಸಲ್ಟಂಟ್ – 10
ಎನ್ವರ್ಮೆಂಟಲ್ ಕನ್ಸಲ್ಟಂಟ್ – 10
ಸೋಷಿಯಲ್ ಡೆವಲ್ಮೆಂಟ್ ಕನ್ಸಲ್ಟಂಟ್ – 7
ಫೈನಾನ್ಸ್ ಕನ್ಸಲ್ಟಂಟ್ – 11
ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಈ ಹುದ್ದೆಗಳ ನೇಮಕಾತಿ ನಡೆಯಲಿದೆ. ಅಧಿಸೂಚನೆಯಲ್ಲಿ ಉಲ್ಲೇಖಿಸಿದ ಜಿಲ್ಲೆಗಳಲ್ಲಿ ಉದ್ಯೋಗ ನಿರ್ವಹಣೆ ಆಯ್ಕೆಗೆ 3 ಜಿಲ್ಲೆಗಳನ್ನು ಆಯ್ಕೆ ಮಾಡಬಹುದಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಸಂಬಂಧಿಸಿದ ಕ್ಷೇತ್ರದಲ್ಲಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಪದವಿಯನ್ನು ಹೊಂದಿರಬೇಕಿದೆ. ಜೊತೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ 2 ವರ್ಷ ಹುದ್ದೆ ನಿರ್ವಹಿಸಿರುವ ಅನುಭವ ಹೊಂದಿರಬೇಕು.
ವೇತನ: ಈ ಹುದ್ದೆಗೆ ಮಾಸಿಕ ₹ 50,000 ದಿಂದ 75,000 ವರೆಗೆ ವೇತನ ನಿಗದಿಸಲಾಗಿದೆ.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 45 ವರ್ಷ ವಯೋಮಿತಿ ಮೀರಿರಬಾರದು.
ಅಭ್ಯರ್ಥಿಗಳು ಕನ್ನಡವನ್ನು ಸ್ಪಷ್ಟವಾಗಿ ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನವಾಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿಗೆ swachhamevajayate.org ಭೇಟಿ ನೀಡಬಹುದಾಗಿದೆ.
HALನಲ್ಲಿ ಅಪ್ರೆಂಟಿಸ್ ಹುದ್ದೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ಎಎಲ್)ನಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಗೌರವಧನದ ಮೇಲೆ 12 ತಿಂಗಳ ಅವಧಿಗೆ ನೇಮಕಾತಿ ನಡೆಯಲಿದೆ.
ಅಭ್ಯರ್ಥಿಗಳು ಐಟಿಐ ಪೂರ್ಣಗೊಳಿಸಿರಬೇಕು. ಮೆರಿಟ್ ಮೇಲೆ ಈ ಹುದ್ದೆ ಆಯ್ಕೆ ನಡೆಯಲಿದೆ. ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಜೊತೆಗೆ ನೀಡಲಾಗಿರುವ ನಿಗದಿತ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ಪ್ರಮಾಣ ಪತ್ರಗಳೊಂದಿಗೆ ಟೆಕ್ನಿಕಲ್ ಟ್ರೈನಿಂಗ್ ಇನ್ಸಟಿಟ್ಯೂಟ್, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್, ಸುರಂಜನ್ ದಾಸ್ ರಸ್ತೆ, ವಿಮಾನಪುರ ಪೋಸ್ಟ್, ಬೆಂಗಳೂರು -560017 ಇಲ್ಲಿಗೆ ಕಳುಹಿಸಬೇಕು.
ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 19. ಈ ಕುರಿತು ಹೆಚ್ಚಿನ ಮಾಹಿತಿಗೆ hal-india.co.in ಭೇಟಿ ನೀಡಿ.