ಮನೆ ಉದ್ಯೋಗ ಬಿಇಎಲ್ ನಲ್ಲಿ ಲೈಬ್ರರಿ ಸೈನ್ಸ್ ಪದವೀಧರರಿಗೆ ಉದ್ಯೋಗಾವಕಾಶ

ಬಿಇಎಲ್ ನಲ್ಲಿ ಲೈಬ್ರರಿ ಸೈನ್ಸ್ ಪದವೀಧರರಿಗೆ ಉದ್ಯೋಗಾವಕಾಶ

0

ನಳಂದ- ಬಿಇಎಲ್ ಅಕಾಡೆಮಿ ಫಾರ್ ಎಕ್ಸಲೆನ್ಸ್​ನ ತರಬೇತಿ ಅಕಾಡೆಮಿಯಲ್ಲಿ ಕಾರ್ಯ ನಿರ್ವಹಣೆಗೆ ಟ್ರೈನಿ ಆಫೀಸರ್​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರಿನಲ್ಲಿ ಕೆಲಸ ಮಾಡುವ ಇಚ್ಛೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆಫ್​​ಲೈನ್​ ಮೂಲಕ ಭರ್ತಿ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 20 ಆಗಿದೆ.

ಇನ್ನು ಈ ಹುದ್ದೆಯನ್ನು ತಾತ್ಕಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ನಳಂದ- ಬಿಇಎಲ್ ಅಕಾಡೆಮಿ ಫಾರ್ ಎಕ್ಸಲೆನ್ಸ್​ನ ತರಬೇತಿ ಅಕಾಡೆಮಿಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

ಹುದ್ದೆಯ ಹೆಸರು: ಟ್ರೈನಿ ಆಫೀಸರ್-I

ಹುದ್ದೆಗಳ ಸಂಖ್ಯೆ: 1

ಉದ್ಯೋಗ ಸ್ಥಳ: ಬೆಂಗಳೂರು

ವೇತನ: 30000-40000 ರೂ. ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಲೈಬ್ರರಿ ಸೈನ್ಸ್​ನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಅನುಭವದ ವಿವರಗಳು

ಅಭ್ಯರ್ಥಿಗಳು ಕನಿಷ್ಠ 01 ವರ್ಷದ ಸಂಬಂಧಿತ ಹುದ್ದೆ ಸಂಬಂಧ ಅಭ್ಯರ್ಥಿಯು ಕಾರ್ಯ ನಿರ್ವಹಿಸಿದ ಅನುಭವವನ್ನು ಹೊಂದಿರಬೇಕು.

ವಯೋಮಿತಿ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 28 ವರ್ಷಗಳಾಗಿರಬೇಕು.

ವಯೋಮಿತಿ ಸಡಿಲಿಕೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಿಯಮಗಳ ಪ್ರಕಾರ

ಅರ್ಜಿ ಶುಲ್ಕ: ಪ. ಜಾ, ಪ. ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ

ಎಲ್ಲಾ ಇತರ ಅಭ್ಯರ್ಥಿಗಳು: 150 ರೂ.

ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05- ಜುಲೈ 2022

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಜುಲೈ 2022

ಅಧಿಕೃತ ವೆಬ್‌ಸೈಟ್: bel-india.in

ಅರ್ಜಿ ಸಲ್ಲಿಕೆ ವಿಧಾನ : ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

ಅಧಿಕೃತ ವೆಬ್​ಸೈಟ್​ ಮೂಲಕ ನಿಗದಿತ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಮೇಲ್ಕಂಡ ಇಮೇಲ್​ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.

ಅರ್ಜಿಜೊತೆಗೆ  ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ ಈ ​ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ

ಮ್ಯಾನೇಜರ್ (HRD/BAE), ನಳಂದ – BEL ಅಕಾಡೆಮಿ ಫಾರ್ ಎಕ್ಸಲೆನ್ಸ್, ಕುವೆಂಪು ಸರ್ಕಲ್, ಜಾಲಹಳ್ಳಿ ಪೋಸ್ಟ್, ಬೆಂಗಳೂರು – 560013