ಮನೆ ಉದ್ಯೋಗ ಏರ್​ ಇಂಡಿಯಾ ವಿಮಾನ ಸಂಸ್ಥೆಯಲ್ಲಿ ವಿವಿಧ ಕ್ಯಾಬಿನ್​ ಕ್ರೂ ಹುದ್ದೆಗಳಿಗೆ ಅರ್ಜಿ ಆಹ್ವಾನ

ಏರ್​ ಇಂಡಿಯಾ ವಿಮಾನ ಸಂಸ್ಥೆಯಲ್ಲಿ ವಿವಿಧ ಕ್ಯಾಬಿನ್​ ಕ್ರೂ ಹುದ್ದೆಗಳಿಗೆ ಅರ್ಜಿ ಆಹ್ವಾನ

0

ಏರ್​ ಇಂಡಿಯಾ ವಿಮಾನ ಯಾನ ಸಂಸ್ಥೆಯಲ್ಲಿ ವಿವಿಧ ಕ್ಯಾಬಿನ್​ ಕ್ರೂ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಂಸ್ಥೆಯ ವೆಬ್​ಸೈಟ್​​ ಮುಖಾಂತರ ಆನ್​ಲೈನ್​ ಮೂಲಕ  ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 5 ಆಗಿದೆ.

ಹುದ್ದೆಯ ವಿವರ

ಸಂಸ್ಥೆ: ಏರ್ ಇಂಡಿಯಾ ಲಿಮಿಟೆಡ್

ಹುದ್ದೆ: ಕ್ಯಾಬಿನ್ ಕ್ರ್ಯೂ

ಹುದ್ದೆ ಸಂಖ್ಯೆ: ನಿರ್ಧಿಷ್ಟ ಪಡಿಸಿಲ್ಲ

ವೇತನ: ಏರ್​ ಇಂಡಿಯಾ ನಿಯಮದ ಪ್ರಕಾರ

ಶೈಕ್ಷಣಿಕ ಅರ್ಹತೆ : ಏರ್ ಇಂಡಿಯಾ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ : ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 22 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ: ಅನುಭವಿ ಸಿಬ್ಬಂದಿ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ : ಯಾವುದೇ ರೀತಿಯ ಅರ್ಜಿ ಶುಲ್ಕ ವಿಧಿಸಿಲ್ಲ.

ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು : ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01 ಜುಲೈ 2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05 ಜುಲೈ 2022

ಅಧಿಕೃತ ವೆಬ್‌ಸೈಟ್: airindia.in

ಹುದ್ದೆ ಅರ್ಹತೆ

ಅಗತ್ಯವಿರುವ ಕನಿಷ್ಠ ಎತ್ತರ: ಮಹಿಳಾ ಅಭ್ಯರ್ಥಿಗಳು – 157 ಸೆಂ / ಪುರುಷ ಅಭ್ಯರ್ಥಿಗಳು – 172 ಸೆಂ ಇರಬೇಕು

ತೂಕ: ಎತ್ತರಕ್ಕೆ ಅನುಗುಣವಾಗಿ

ಇಂಗ್ಲಿಷ್ ಮತ್ತು ಹಿಂದಿಯಲ್ಲಿ ನಿರರ್ಗಳವಾಗಿ ಮಾತನಾಡಲು ಬರಬೇಕು.

ದೃಷ್ಟಿ 6/6 ಇರಬೇಕು.

ಅರ್ಜಿ ಸಲ್ಲಿಕೆ ವಿಧಾನ

ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಮೇಲ್ಕಂಡ ಇಮೇಲ್​ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.

ಅರ್ಜಿ ಜೊತೆಗೆ ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ.