ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ನಲ್ಲಿ ಟೆಲಿ ಕೌನ್ಸಿಲರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಧಾರವಾಡ ಮತ್ತು ಕಲಬುರಗಿಯಲ್ಲಿ ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಆರೋಗ್ಯ ವಿಚಾರ ಸಂಬಂಧ ಕುಟುಂಬ ಮತ್ತು ರೋಗಿಗಳ ಸಮಾಲೋಚಕರಾಗಿ ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 27 ಆಗಿದೆ.
ಧಾರವಾಡದಲ್ಲಿ 7 ಮತ್ತು ಕಲಬುರ್ಗಿಯಲ್ಲಿ ಒಟ್ಟು 10 ಹುದ್ದೆಗಳು ಖಾಲಿ ಇವೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಶೈಕ್ಷಣಿಕ ಅರ್ಹತೆ: ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಮನೋವಿಜ್ಞಾನ/ಸಮಾಜ ಕೆಲಸದಲ್ಲಿ ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಿಶೇಷ ಸೂಚನೆ: ಕಾಲ್ ಸೆಂಟರ್‌ಗಳು/ಕೌನ್ಸೆಲಿಂಗ್ ಸೆಂಟರ್‌ಗಳು/ಟೆಲಿ ಕೌನ್ಸೆಲಿಂಗ್ ನೆಟ್‌ವರ್ಕ್‌ಗಳೊಂದಿಗೆ ಕೆಲಸ ಮಾಡಿದ ಅನುಭವ ಹೊಂದಿರುವವರಿಗೆ ಆದ್ಯತೆ
ದಿನಕ್ಕೆ 7 – 8 ಗಂಟೆಗಳ ಕಾಲ ಕರೆ ಮಾಡುವ ಸಾಮರ್ಥ್ಯ ಹೊಂದಿದ್ದು, ಪರಸ್ಪರ ಮತ್ತು ಸಂವಹನ ಕೌಶಲ್ಯಗಳು ಇರಬೇಕು. ಜೊತೆಗೆ ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯತೆ ಇರಬೇಕು.
ವಯಸ್ಸಿನ ಮಿತಿ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ಆಯ್ಕೆ ವಿಧಾನ: ಶಾರ್ಟ್ಲಿಸ್ಟ್ ಮತ್ತು ಸಂದರ್ಶನ
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 13 ಜುಲೈ 2022
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 27 ಜುಲೈ 2022
ಅಧಿಕೃತ ವೆಬ್‌ಸೈಟ್: khpt.org
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಅಧಿಕೃತ ಅಧಿಸೂಚನೆಯಿಂದ- ಲಭ್ಯವಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ. ಇಲ್ಲ ಮೇಲ್ಕಂಡ ವಿಳಾಸಕ್ಕೆ ಸ್ಪೀಡ್ ಅಥವಾ ರಿಜಿಸ್ಟರ್ ಪೋಸ್ಟ್ ಮಾಡಬಹುದಾಗಿದೆ.