ಮನೆ ಉದ್ಯೋಗ ಪ್ರವಾಸೋದ್ಯಮ ಸಂಸ್ಥೆಯಲ್ಲಿ ವಿವಿಧ ಮ್ಯಾನೇಜರ್​ ಹುದ್ದೆಗೆ ಅರ್ಜಿ ಆಹ್ವಾನ

ಪ್ರವಾಸೋದ್ಯಮ ಸಂಸ್ಥೆಯಲ್ಲಿ ವಿವಿಧ ಮ್ಯಾನೇಜರ್​ ಹುದ್ದೆಗೆ ಅರ್ಜಿ ಆಹ್ವಾನ

0

ಭಾರತೀಯ ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ ಸಂಸ್ಥೆ ವಿವಿಧ ಮ್ಯಾನೇಜರ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪ್ರವಾಸೋದ್ಯಮ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆ ಸೇರಿದಂತೆ ಒಟ್ಟು 31 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರವಾಸೋದ್ಯಮದಲ್ಲಿ ಎಂಬಿಎ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 5 ಆಗಿದೆ.
ಈ ಹುದ್ದೆಗಳು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಒಂದು ವರ್ಷದ ಒಪ್ಪಂದದ ಮೇರೆಗೆ ನೇಮಕಾತಿ ನಡೆಸಲಾಗುವುದು. ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ವಿಸ್ತರಣೆ ನಡೆಸಲಾಗುವುದು..

ಸಂಸ್ಥೆಯ ಹೆಸರು: ಭಾರತೀಯ ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ ಸಂಸ್ಥೆ (IITTM)
ಹುದ್ದೆಯ ಹೆಸರು: ಪ್ರವಾಸೋದ್ಯಮ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ
ಹುದ್ದೆಗಳ ಸಂಖ್ಯೆ: 31
ಉದ್ಯೋಗ ಸ್ಥಳ: ದೇಶಾದ್ಯಂತ
ಸಂಬಳ: 50000-75000 ರೂ. ಮಾಸಿಕ

ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪ್ರವಾಸೋದ್ಯಮದಲ್ಲಿ ಎಂಬಿಎ ಪದವಿ ಪೂರ್ಣಗೊಳಿಸಿರಬೇಕು.
ಅನುಭವ:
ಪ್ರವಾಸೋದ್ಯಮ ವ್ಯವಸ್ಥಾಪಕರು: ಕೇಂದ್ರ ಅಥವಾ ರಾಜ್ಯ ಸರ್ಕಾರದ ಯೋಜನೆಗಳಲ್ಲಿ ಅಥವಾ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅಭ್ಯರ್ಥಿಗಳು 05 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇರಬೇಕು.

ಸಹಾಯಕ ವ್ಯವಸ್ಥಾಪಕರು: ಕೇಂದ್ರ ಅಥವಾ ರಾಜ್ಯ ಸರ್ಕಾರದ ಯೋಜನೆಗಳಲ್ಲಿ ಅಥವಾ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅಭ್ಯರ್ಥಿಗಳು 02 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇರಬೇಕು.

ವಯೋಮಿತಿ ಸಡಿಲಿಕೆ: ಭಾರತೀಯ ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ  ಸಂಸ್ಥೆ ನಿಯಮಗಳ ಪ್ರಕಾರ

ಅರ್ಜಿ ಶುಲ್ಕ: ಎಲ್ಲಾ ಅಭ್ಯರ್ಥಿಗಳು: 500 ರೂ

ಪಾವತಿ ವಿಧಾನ: ಆನ್‌ಲೈನ್ ಹಾಗೂ ಆಫ್‌ಲೈನ್

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28 ಜುಲೈ  2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05 ಆಗಸ್ಟ್ 2022

ಅಧಿಕೃತ ವೆಬ್‌ಸೈಟ್: iittm.ac.in

ಅರ್ಜಿ ಸಲ್ಲಿಕೆ ವಿಳಾಸ : ನಿರ್ದೇಶಕ-IITTM, ಗೋವಿಂದಪುರಿ, ಗ್ವಾಲಿಯರ್- 474011, ಮಧ್ಯ ಪ್ರದೇಶ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ

ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ

ಆನ್‌ಲೈನ್ ಮೋಡ್ ಮೂಲಕ ನಿಗದಿತ ಅರ್ಜಿಯನ್ನು ಡೌನ್​ ಲೋಡ್​ ಮಾಡಿ. ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

ಆನ್‌ಲೈನ್‌ನಲ್ಲಿ ಲಾಗ್​ ಇನ್​ ಆಗಿ. ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಮೇಲಿನ  ವಿಳಾಸಕ್ಕೆ ಅರ್ಜಿ ಸಲ್ಲಿಸಿ.

  • ಟ್ಯಾಗ್ಗಳು
  • jobs
ಹಿಂದಿನ ಲೇಖನಸಿದ್ದರಾಮೋತ್ಸವಕ್ಕೆ ತೆರಳುತ್ತಿದ್ದ ಕ್ರೂಸರ್‌ ಪಲ್ಟಿ: ಓರ್ವ ಸಾವು
ಮುಂದಿನ ಲೇಖನಉಕ್ಕಿ ಹರಿಯುತ್ತಿರುವ ಪಯಸ್ವಿನಿ ನದಿ: ಮಂಗಳೂರು-ಮೈಸೂರು ಹೆದ್ದಾರಿ  ಬಂದ್