ಮನೆ ಉದ್ಯೋಗ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿದೆ ಉದ್ಯೋಗ

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿದೆ ಉದ್ಯೋಗ

0

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಕಚೇರಿ ಸೂಪರಿಂಟೆಂಡೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಸಂದರ್ಶನದ ಮೂಲಕ ಈ ಹುದ್ದೆ ಆಯ್ಕೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 22 ಆಗಿದೆ.
ಈ ಹುದ್ದೆಯನ್ನು ತಾತ್ಕಾಲಿಕವಾಗಿ ಗುತ್ತಿಗೆ ಅಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಹುದ್ದೆ ಅವಧಿ 11 ತಿಂಗಳಾಗಿದ್ದು, ಈಗಾಗಲೇ ಸರ್ಕಾರದಲ್ಲಿ ಅಧೀಕ್ಷಕರಾಗಿ ಕಾರ್ಯ ನಿರ್ವಹಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ.

ಕಚೇರಿ ಸೂಪರಿಂಟೆಂಡೆಂಟ್ ಹುದ್ದೆ ಖಾಲಿ ಇದ್ದು, ಹುಬ್ಬಳ್ಳಿಯಲ್ಲಿ ಕಾರ್ಯನಿರ್ವಹಿಸಲು ಇಚ್ಛೆವುಳ್ಳವರು ಅರ್ಜಿ ಸಲ್ಲಿಸಬಹುದಾಗಿದೆ. ಪ್ರತಿ ತಿಂಗಳು 22790 ವೇತನ ನಿಗದಿ ಪಡಿಸಲಾಗಿದೆ.

ಶೈಕ್ಷಣಿಕ ಅರ್ಹತೆ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ನೇಮಕಾತಿ ನಿಯಮಗಳ ಪ್ರಕಾರ
ಅನುಭವದ ವಿವರಗಳು
ಅಭ್ಯರ್ಥಿಗಳು ಸರ್ಕಾರಿ ನೌಕರರಾಗಿ ಸೇವೆ ಸಲ್ಲಿಸಿರಬೇಕು ಮತ್ತು ಅಧೀಕ್ಷಕರಾಗಿ ಕೆಲಸ ಮಾಡಿರಬೇಕು.

ವಯೋಮಿತಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 65 ವರ್ಷಗಳು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ನಿಯಮಗಳ ಪ್ರಕಾರ

ಆಯ್ಕೆ ಪ್ರಕ್ರಿಯೆ: ಸಂದರ್ಶನ
ಅರ್ಜಿ ಸಲ್ಲಿಕೆ: ಆಫ್​ಲೈನ್​

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14 ಜುಲೈ 2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಜುಲೈ 2022

ಅಧಿಕೃತ ವೆಬ್‌ಸೈಟ್: kslu.karnataka.gov.in

ಅರ್ಜಿ ಸಲ್ಲಿಕೆ ಪ್ರಕ್ರಿಯೆ: ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಅರ್ಜಿಯಲ್ಲಿ ನಮೂದಿಸಿ

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಈ ಕೆಳಗಿನ ವಿಳಾಸಕ್ಕೆ ಅಂಚೆ, ಸ್ಪೀಡ್​ ಅಥವಾ ರಿಜಿಸ್ಟರ್​ ಪೋಸ್ಟ್​ ಮೂಲಕ ಕಳುಹಿಸಬೇಕು

ಅಧೀನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ನವನಗರ, ಹುಬ್ಬಳ್ಳಿ-580025

ಹಿಂದಿನ ಲೇಖನಎಸಿಬಿ ಕುರಿತು ಹೈಕೋರ್ಟ್‌ ಆರೋಪ, ಆದೇಶಗಳಿಗೆ ತಡೆನೀಡಿದ ಸುಪ್ರೀಂ ಕೋರ್ಟ್‌
ಮುಂದಿನ ಲೇಖನಮಲೆಮಹದೇಶ್ವರ ಬೆಟ್ಟ: ಪೂಜೆ ಮಾಡುವಾಗ ಕುಸಿದು ಬಿದ್ದು ಅರ್ಚಕ ಸಾವು