ಮನೆ ಉದ್ಯೋಗ ಸೌತ್ ಈಸ್ಟರ್ನ್ ಕೋಲ್ ಫೀಲ್ಡ್ಸ್ ಲಿಮಿಟೆಡ್ ನಲ್ಲಿದೆ ಉದ್ಯೋಗಾವಕಾಶ

ಸೌತ್ ಈಸ್ಟರ್ನ್ ಕೋಲ್ ಫೀಲ್ಡ್ಸ್ ಲಿಮಿಟೆಡ್ ನಲ್ಲಿದೆ ಉದ್ಯೋಗಾವಕಾಶ

0

ಸಾವಿರಕ್ಕೂ ಹೆಚ್ಚು ಇಂಜಿನಿಯರ್’ಗಳು, ಡಿಪ್ಲೊಮಾ ಓದಿದವರನ್ನು ನೇಮಕಾತಿ ಮಾಡಿಕೊಳ್ಳಲು ಸೌತ್ ಈಸ್ಟರ್ನ್ ಕೋಲ್ ಫೀಲ್ಡ್ಸ್ ಲಿಮಿಟೆಡ್ ಮುಂದಾಗಿದೆ.

ಇದು ಭಾರತದ ಅತಿದೊಡ್ಡ ಕಲ್ಲಿದ್ದಲು ಉತ್ಪಾದನಾ ಕಂಪನಿಯಾಗಿದೆ.  ಕೋಲ್ ಇಂಡಿಯಾ ಲಿಮಿಟೆಡ್ನ ಎಂಟು ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಗಳಲ್ಲಿ ಒಂದಾಗಿದೆ. ಕಂಪನಿಯು ತನ್ನ ಪ್ರಧಾನ ಕಚೇರಿಯನ್ನು ಬಿಲಾಸ್ಪುರ, ಛತ್ತೀಸ್ಗಢ್ ನಲ್ಲಿ ಹೊಂದಿದೆ. ಇನ್ನು ಯಾವೆಲ್ಲಾ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ? ಹೇಗೆ ಅರ್ಜಿ ಸಲ್ಲಿಸಬೇಕು ಸೇರಿದಂತೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಸಂಸ್ಥೆಯ ಹೆಸರು:  ಸೌತ್ ಈಸ್ಟರ್ನ್ ಕೋಲ್ ಫೀಲ್ಡ್ಸ್ ಲಿಮಿಟೆಡ್

ಹುದ್ದೆಯ ಹೆಸರು:  ಗ್ರಾಜುಯೇಟ್ ಅಪ್ರೆಂಟಿಸ್, ಡಿಪ್ಲೊಮಾ ಅಪ್ರೆಂಟಿಸ್

ಹುದ್ದೆಗಳ ಸಂಖ್ಯೆ:  ಒಟ್ಟು 1150 ಹುದ್ದೆಗಳು

ಪ್ರಮುಖ ದಿನಾಂಕಗಳು

ಆನ್’ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 29-11-2022

ಆನ್’ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 19-12-2022

ಆಯ್ಕೆ ವಿಧಾನ: ವಿದ್ಯಾರ್ಹತೆಯ ಅಂಕಗಳು ಹಾಗೂ ಮೀಸಲಾತಿಗೆ ಅನುಗುಣವಾಗಿ ಆಯ್ಕೆ ಮಾಡಲಾಗುವುದು.

ವೇತನದ ಮಾಹಿತಿ

ಗ್ರಾಜುಯೇಟ್ ಅಪ್ರೆಂಟಿಸ್ ಸ್ಟೈಫಂಡ್ : 9,000 ರೂ.

ಡಿಪ್ಲೊಮಾ ಅಪ್ರೆಂಟಿಸ್ ಸ್ಟೈಫಂಡ್ : 8,000 ರೂ.

 ಅರ್ಜಿ ಸಲ್ಲಿಕೆ ವಿಧಾನ: ಅಭ್ಯರ್ಥಿಗಳು ವೆಬ್ಸೈಟ್ www.mhrdnats.gov.in ಗೆ ಭೇಟಿ ನೀಡಿ ರಿಜಿಸ್ಟ್ರೇಷನ್ ಪಡೆಯುವ ಮೂಲಕ ಅರ್ಜಿ ಸಲ್ಲಿಸಬೇಕು.

ಅಧಿಕೃತ ವೆಬ್ಸೈಟ್:   http://www.secl-cil.in/career.php

ಅರ್ಜಿ ಜೊತೆ ಸಲ್ಲಿಸಲು ಬೇಕಾದ ದಾಖಲೆಗಳು

ಜನ್ಮ ದಿನಾಂಕ ಮಾಹಿತಿ

ಫೋಟೋ ಕಾಪಿ

SSLC ಅಂಕಪಟ್ಟಿ

ಡಿಪ್ಲೊಮ ಪಾಸ್ ಸರ್ಟಿಫಿಕೇಟ್, ಅಂಕಗಳು

ಬಿಇ ಪದವಿ ಪಾಸ್ ಸರ್ಟಿಫಿಕೇಟ್, ಅಂಕಗಳು

ಅರ್ಜಿ ಸಲ್ಲಿಕೆ ಪ್ರಕ್ರಿಯೆ

ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

ರೆಸ್ಯೂಮೆ ಜೊತೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಮೇಲಿನ  ವಿಳಾಸಕ್ಕೆ ನಿಗದಿತ ದಿನಾಂಕದ ಮುನ್ನ ಕಳುಹಿಸಬೇಕು.