ತುಮಕೂರು ಜಿಲ್ಲಾಧಿಕಾರಿ ಜಿಲ್ಲಾ ನಗರಾಭಿವೃದ್ಧಿ ಕೋಶದಿಂದ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಲೋಡರ್ ಮತ್ತು ಕ್ಲೀನರ್ ಹುದ್ದೆಗಳು ಖಾಲಿ ಇದ್ದು, ಇವುಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಪುರಸಭೆಗಳಲ್ಲಿ ಖಾಲಿ ಇರುವ ಒಟ್ಟು 7 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಜಿಲ್ಲೆಯ ತಾಲೂಕುಗಳಲ್ಲಿ ಖಾಲಿ ಇರುವ ಈ ಹುದ್ದೆಗಳಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಚಿಕ್ಕನಾಯಕನಹಳ್ಳಿ ಪುರಸಭೆಯಲ್ಲಿ ಲೋಡರಲ್ಸ್, ಕ್ಲೀನರ್ಸ್ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ, ಸಮಾನಾ ಕೆಲಸಕ್ಕೆ ಸಮಾನ ವೇತನ, ಹೊರಗುತ್ತಿಗೆ ಕಾರ್ಯದಡಿ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಹೊರಗುತ್ತಿಗೆ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಹೆಚ್ಚಿನ ವಿವರವನ್ನು ತುಮಕೂರು ನಗರಾಭಿವೃದ್ಧಿ ಕೋಶ ಮತ್ತು ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೂಡ ಪಡೆಯಬಹುದಾಗಿದೆ.
ಸಂಸ್ಥೆಯ ಹೆಸರು: ಜಿಲ್ಲಾಧಿಕಾರಿ ಕಚೇರಿ ತುಮಕೂರು
ಹುದ್ದೆಯ ಹೆಸರು: ಲೋಡರ್‌ಗಳು, ಕ್ಲೀನರ್‌ಗಳು
ಹುದ್ದೆಗಳ ಸಂಖ್ಯೆ: 07
ಉದ್ಯೋಗ ಸ್ಥಳ: ತುಮಕೂರು – ಕರ್ನಾಟಕ
ವೇತನ: 17000-28950 ರೂ. ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ: ಡಿಸಿ ಕಚೇರಿ ತುಮಕೂರು ನೇಮಕಾತಿ ನಿಯಮಗಳ ಪ್ರಕಾರ
ವಿಶೇಷ ಸೂಚನೆ: ಅಭ್ಯರ್ಥಿಗಳು ಕನ್ನಡ ಮಾತನಾಡಲು ತಿಳಿದಿರಬೇಕು
ವಿದ್ಯಾರ್ಹತೆ ಅನ್ವಯಿಸುವುದಿಲ್ಲ.
ವಯೋಮಿತಿ: ಜಿಲ್ಲಾಧಿಕಾರಿ ಕಚೇರಿ ತುಮಕೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಜಿಲ್ಲಾಧಿಕಾರಿ ಕಚೇರಿ ತುಮಕೂರು ನಿಯಮಾವಳಿ ಪ್ರಕಾರ
ಅರ್ಜಿ ಸಲ್ಲಿಕೆ: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 1 ಜುಲೈ 2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಜುಲೈ 2022
ಅಧಿಕೃತ ವೆಬ್‌ಸೈಟ್: tumkur.nic.in
ಅರ್ಜಿ ಸಲ್ಲಿಕೆ ವಿಧಾನ
ನಿಗದಿತ ಅರ್ಜಿಗಳನ್ನು ತುಮಕೂರು ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಚೇರಿ ಮತ್ತು ಚಿಕ್ಕನಾಯಕನಹಳ್ಳಿ ಪುರಸಭೆಯಲ್ಲಿ ಪಡೆಯಬಹುದು.
ಅರ್ಜಿದಾರರು ಅರ್ಜಿ ನಮೂನೆಯನ್ನು ಪಡೆದ ಬಳಿಕ ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ವಿಳಾಸಕ್ಕೆ ಸಲ್ಲಿಸಬೇಕು.
ಜಿಲ್ಲಾಧಿಕಾರಿಗಳ ಕಛೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶ, ತುಮಕೂರು ಇಲ್ಲಿಗೆ ಖುದ್ದು ಅಥವಾ ಪೋಸ್ಟ್ ಮೂಲಕ ಸಲ್ಲಿಸಬೇಕು.