ಮನೆ ಉದ್ಯೋಗ ಮೀನುಗಾರಿಕೆ ಇಲಾಖೆಯಲ್ಲಿದೆ ಕೆಲಸ; ಅರ್ಜಿ ಸಲ್ಲಿಕೆಗೆ ಜು.30 ಕಡೆ ದಿನ

ಮೀನುಗಾರಿಕೆ ಇಲಾಖೆಯಲ್ಲಿದೆ ಕೆಲಸ; ಅರ್ಜಿ ಸಲ್ಲಿಕೆಗೆ ಜು.30 ಕಡೆ ದಿನ

0

ರಾಜ್ಯದ ಮೀನುಗಾರಿಕೆ ಇಲಾಖೆಯಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಉಪ ಯೋಜನಾ ವ್ಯವಸ್ಥಾಪಕ ಮತ್ತು ಜಿಲ್ಲಾ ಯೋಜನಾ ವ್ಯವಸ್ಥಾಪಕರು ಹಾಗೂ ಮಲ್ಟಿ ಟಾಸ್ಕಿಂಗ್​ ಸಿಬ್ಬಂದಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 30 ಆಗಿದೆ.

ಈ ಹುದ್ದೆಗಳನ್ನು ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತಿದ್ದು, ಕೇಂದ್ರ ಸರ್ಕಾರದ ಅನುದಾನ ಲಭ್ಯತೆ ಮೇರೆ ಮುಂದುವರೆಸಲಾಗುವುದು. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

ಸಂಸ್ಥೆ: ಮೀನುಗಾರಿಗೆ ನಿರ್ದೇಶನಾಯಕ
ಹುದ್ದೆ: ರಾಜ್ಯ ಉಪ ಯೋಜನಾ ವ್ಯವಸ್ಥಾಪಕ, ಜಿಲ್ಲಾ ಯೋಜನಾ ವ್ಯವಸ್ಥಾಪಕರು ಹಾಗೂ ಮಲ್ಟಿ ಟಾಸ್ಕಿಂಗ್​ ಸಿಬ್ಬಂದಿ
ಒಟ್ಟು ಹುದ್ದೆ : 3
ಕಾರ್ಯ ನಿರ್ವಹಣೆ ಸ್ಥಳ: ಬೆಂಗಳೂರು
ವೇತನ: 15000- 55000 ರೂ ಮಾಸಿಕ

ವಿದ್ಯಾರ್ಹತೆ ಮತ್ತು ಅನುಭವ
ರಾಜ್ಯ ಉಪ ಯೋಜನಾ ವ್ಯವಸ್ಥಾಪಕ : ಮೀನುಗಾರಿಕಾ ವಿಜ್ಞಾನದಲ್ಲಿ ಸ್ನಾತಕೋತ್ತರ / ಸಾಗರ ಪ್ರಾಣಿಶಾಸ್ತ್ರದಲ್ಲಿ ಎಂಎಸ್ಸಿ ಮೀನುಗಾರಿಕೆ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ.
ಅನುಭವ: 5 ವರ್ಷ ಮೀನುಗಾರಿಕೆ ಮತ್ತು ಜಲಕೃಷಿಯಲ್ಲಿ ಕೆಲಸ ಮಾಡಿದ ಅನುಭವ

ಜಿಲ್ಲಾ ಯೋಜನಾ ವ್ಯವಸ್ಥಾಪಕರು: ಮೀನುಗಾರಿಕೆ ವಿಜ್ಞಾನದಲ್ಲಿ ಸ್ನಾತಕೋತ್ತರ/ಎಂ.ಎಸ್ಸಿ ಪ್ರಾಣಿಶಾಸ್ತ್ರ/ ಜೀವಶಾಸ್ತ್ರ/ಮೀನುಗಾರಿಕೆ ಅರ್ಥಶಾಸ್ತ್ರ/ಕೈಗಾರಿಕಾ ಮೀನುಗಾರಿಕೆಯಲ್ಲಿ ಸ್ನಾತಕೋತ್ತರ/ಮೀನುಗಾರಿಕೆ ವ್ಯವಹಾರ ನಿರ್ವಹಣೆ

ಅನುಭವ: 3 ವರ್ಷ ಮೀನುಗಾರಿಕೆ ಮತ್ತು ಜಲಕೃಷಿಯಲ್ಲಿ ಕೆಲಸ ಮಾಡಿದ ಅನುಭವ

ಮಲ್ಟಿ ಟಾಸ್ಕಿಂಗ್ಸಿಬ್ಬಂದಿ: 10ನೇ ತರಗತಿ ಉತ್ತೀರ್ಣ
ಅನುಭವ: 3 ವರ್ಷ ಮೀನುಗಾರಿಕೆ ಮತ್ತು ಜಲಕೃಷಿಯಲ್ಲಿ ಕೆಲಸ ಮಾಡಿದ ಅನುಭವ

ಅರ್ಜಿ ಸಲ್ಲಿಕೆ: ಆಫ್​ಲೈನ್​
ಅರ್ಜಿ ಶುಲ್ಕ : ವಿನಾಯಿತಿ

ಆಯ್ಕೆ ಪ್ರಕ್ರಿಯೆ: ನೇಮಕಾತಿ ಪರೀಕ್ಷೆ ಮತ್ತು ಸಂದರ್ಶನ

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20 ಜೂನ್​ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಜುಲೈ 2022

ಅಧಿಕೃತ ವೆಬ್‌ಸೈಟ್: fisheries.karnataka.gov.in

ಅರ್ಜಿ ಸಲ್ಲಿಕೆ ವಿಧಾನ


ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸ್ಪೀಡ್​ ಪೋಸ್ಟ್​ ಅಥವಾ ರಿಜಿಸ್ಟರ್​ ಪೋಸ್ಟ್​ ಮೂಲಕ ಈ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.

ಮೀನುಗಾರಿಕೆ ನಿರ್ದೇಶನಾಲಯ, 3ನೇ ಮಹಡಿ, ಪೋಡಿಯಂ ಬ್ಲಾಕ್​, ವಿಶ್ವೇಶ್ವರಯ್ಯ ಕೇಂದ್ರ, ಡಾ. ಬಿ.ಆರ್ಅಂಬೇಡ್ಕರ್ವೀಧಿ, ಬೆಂಗಳೂರು-560001