ಮೈಸೂರು ವಿಶ್ವ ವಿದ್ಯಾಲಯದಲ್ಲಿ ಸಂಶೋಧಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಶೋಧನಾ ಸಹಾಯಕ, ಕ್ಷೇತ್ರ ತನಿಖಾಧಿಕಾರಿ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 2 ಆಗಿದೆ.
ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ವಿಶ್ವವಿದ್ಯಾಲಯದ ಹೆಸರು: ಮೈಸೂರು ವಿಶ್ವವಿದ್ಯಾಲಯ
ಹುದ್ದೆಯ ಹೆಸರು: ಸಂಶೋಧನಾ ಸಹಾಯಕ, ಫೀಲ್ಡ್ ಇನ್ವೆಸ್ಟಿಗೇಟರ್
ಹುದ್ದೆಗಳ ಸಂಖ್ಯೆ: 02
ಉದ್ಯೋಗ ಸ್ಥಳ: ಮೈಸೂರು
ವೇತನ: 15000-16000ರೂ. ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ: ಮೈಸೂರು ವಿಶ್ವವಿದ್ಯಾನಿಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಮಾಜ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ಮೈಸೂರು ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮೈಸೂರು ವಿಶ್ವವಿದ್ಯಾನಿಲಯದ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ಅರ್ಜಿ ಸಲ್ಲಿಕೆ: ಆಫ್ಲೈನ್
ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ
ಶೈಕ್ಷಣಿಕ ಸಾಧನೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು:
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 26 ಆಗಸ್ಟ್ 2022
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02 ಸೆಪ್ಟೆಂಬರ್ 2022
ಅಧಿಕೃತ ವೆಬ್ಸೈಟ್: uni-mysore.ac.in
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ
ಅರ್ಜಿಯಲ್ಲಿ ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳ ಮಾಹಿತಿ ಭರ್ತಿ ಮಾಡಿ.
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಮೇಲಿನ ವಿಳಾಸಕ್ಕೆ ನಿಗದಿತ ದಿನಾಂಕಕ್ಕೆ ಮುನ್ನ ಸ್ಪೀಡ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಅರ್ಜಿ ರವಾನಿಸಿ.