ಮನೆ ಕಾನೂನು ಜೋಶಿಮಠ ಭೂಕುಸಿತ: ಸುಪ್ರೀಂ ಕೋರ್ಟ್’ಗೆ ಪಿಐಎಲ್ ಸಲ್ಲಿಸಿದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ

ಜೋಶಿಮಠ ಭೂಕುಸಿತ: ಸುಪ್ರೀಂ ಕೋರ್ಟ್’ಗೆ ಪಿಐಎಲ್ ಸಲ್ಲಿಸಿದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ

0

ಉತ್ತರಾಖಂಡದ ಪರ್ವತ ಪಟ್ಟಣ ಜೋಶಿಮಠದಲ್ಲಿ ಉಂಟಾಗಿರುವ ಭೂಕುಸಿತಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಧ್ಯಪ್ರವೇಶಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್’ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ಜೋಶಿಮಠದ ನಿವಾಸಿಗಳಿಗೆ ತಕ್ಷಣದ ಆರ್ಥಿಕ ನೆರವು ಮತ್ತು ಪರಿಹಾರ ದೊರಕಿಸಿಕೊಡಲು ನ್ಯಾಯಾಲಯ ಮಧ್ಯಪ್ರವೇಶಿಸಬೇಕು ಎಂದು ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಅರ್ಜಿಯಲ್ಲಿ ಕೋರಿದ್ದಾರೆ.

ಮನವಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್ ಅವರ ಮುಂದೆ ಪ್ರಸ್ತಾಪಿಸಲಾಯಿತು, ಅವರು ಪ್ರಕರಣವನ್ನು ನಾಳೆ ಪ್ರಸ್ತಾಪಿಸುವಂತೆ ವಕೀಲರಿಗೆ ಸೂಚಿಸಿದರು.

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿರುವ ಜೋಶಿಮಠ 17,000 ಜನಸಂಖ್ಯೆ ಹೊಂದಿದ್ದು ಸಮುದ್ರ ಮಟ್ಟದಿಂದ 1,800 ಮೀಟರ್ ಎತ್ತರದಲ್ಲಿದೆ. ಕಟ್ಟಡಗಳು ಮತ್ತು ರಸ್ತೆಗಳಲ್ಲಿ ಬಿರುಕುಗಳು ಕಾಣಿಸಿಕೊಂಡ ನಂತರ ಜೋಶಿಮಠವನ್ನು ದುರಂತ ಪೀಡಿತ ಪ್ರದೇಶ ಎಂದು ಘೋಷಿಸಲಾಗಿದ್ದು ಅನೇಕ ಜನರನ್ನು ಅಲ್ಲಿಂದ ಸ್ಥಳಾಂತರಿಸಲಾಗಿದೆ.

ವರದಿಯೊಂದರ ಪ್ರಕಾರ ಜೋಶಿಮಠದಲ್ಲಿ ಸುಮಾರು 4,500 ಕಟ್ಟಡಗಳಿದ್ದು ಇವುಗಳಲ್ಲಿ 610 ಕಟ್ಟಡಗಳಲ್ಲಿ ದೊಡ್ಡ ಬಿರುಕು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. 

ಹಿಂದಿನ ಲೇಖನಮೈಸೂರು: ಅಂತರರಾಜ್ಯ ಮನೆಗಳ್ಳನ ಬಂಧನ
ಮುಂದಿನ ಲೇಖನಲಿಂಗತ್ವ ಅಲ್ಪಸಂಖ್ಯಾತರು ಮುಖ್ಯವಾಹಿನಿಗೆ ಬರಬೇಕು: ಬಿ.ಆರ್. ಪೂರ್ಣಿಮಾ