ಮನೆ ಉದ್ಯೋಗ ಮೈಸೂರಿನ ಜೆಎಸ್’ಎಸ್ ಮಹಾವಿದ್ಯಾಪೀಠದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಮೈಸೂರಿನ ಜೆಎಸ್’ಎಸ್ ಮಹಾವಿದ್ಯಾಪೀಠದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಮೈಸೂರಿನ ಜೆಎಸ್’ಎಸ್ ಮಹಾವಿದ್ಯಾಪೀಠ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಕೋಆರ್ಡಿನೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮಾರ್ಚ್ 31, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಆಸಕ್ತರು ತಡಮಾಡದೇ ಈ ಕೂಡಲೇ ಇ-ಮೇಲ್ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ವಿದ್ಯಾರ್ಹತೆ:

ಜೆಎಸ್ ಎಸ್ ಮಹಾವಿದ್ಯಾಪೀಠ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಜೆಎಸ್ ಎಸ್ ಮಹಾವಿದ್ಯಾಪೀಠ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 22 ವರ್ಷ ಮತ್ತು ಗರಿಷ್ಠ 26 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:

ಮೈಸೂರು

ಸೂಚನೆ:

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ jssonline.orgಗೆ ಭೇಟಿ ನೀಡಬಹುದು. ಅಭ್ಯರ್ಥಿಗಳು ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಭಾಷೆಯಲ್ಲಿ ಪ್ರಾವಿಣ್ಯತೆ ಹೊಂದಿರಬೇಕು. ಪುರುಷರಿಗೆ ಆದ್ಯತೆ ನೀಡಲಾಗುತ್ತದೆ ಎಂದು ವಿದ್ಯಾಪೀಠವು ತಿಳಿಸಿದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ sms_mahesh@yahoo.com ಗೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:

ನೋಟಿಫಿಕೇಶನ್ ಬಿಡುಗಡೆ ದಿನಾಂಕ: 01/03/2023

ಇ-ಮೇಲ್ ಕಳುಹಿಸಲು ಕೊನೆಯ ದಿನ: ಮಾರ್ಚ್ 31, 2023 (ನಾಳೆ)