ಮನೆ ರಾಜ್ಯ ಜು. 20ಕ್ಕೆ ಕೆಪಿಸಿಎಲ್ ಸಂಸ್ಥಾಪನಾ ದಿನ: ಕರ್ನಾಟಕ ವಿದ್ಯುತ್ ನಿಗಮ ನಿಯಮಿತಕ್ಕೆ 55ರ ಸಂಭ್ರಮ- ಮುಖ್ಯಮಂತ್ರಿ...

ಜು. 20ಕ್ಕೆ ಕೆಪಿಸಿಎಲ್ ಸಂಸ್ಥಾಪನಾ ದಿನ: ಕರ್ನಾಟಕ ವಿದ್ಯುತ್ ನಿಗಮ ನಿಯಮಿತಕ್ಕೆ 55ರ ಸಂಭ್ರಮ- ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ

0

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮೂಲಕ ಹಲವು ಮೈಲಿಗಲ್ಲು ಸಾಧಿಸಿರುವ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಜುಲೈ 20ರ ಶನಿವಾರ ತನ್ನ 55ನೇ ಸಂಸ್ಥಾಪನಾ ದಿನ ಆಚರಿಸಿಕೊಳ್ಳುತ್ತಿದೆ.

Join Our Whatsapp Group

ಜಲ, ಉಷ್ಣ, ಪವನ, ಸೌರ, ಗ್ಯಾಸ್, ತ್ಯಾಜ್ಯ.. ಹೀಗೆ ಹಲವು ಮೂಲಗಳಿಂದ ವಿದ್ಯುತ್ ಉತ್ಪಾದಿಸುವ ದೇಶದ ಏಕೈಕ ಸರಕಾರಿ ಸ್ವಾಮ್ಯದ ಸಂಸ್ಥೆಯಾಗಿರುವ ಕೆಪಿಸಿಎಲ್ ನ 55ನೇ ಸಂಸ್ಥಾಪನಾ ದಿನವನ್ನು  ಜು. 20ರಂದು ಸಂಜೆ 5 ಗಂಟೆಗೆ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕೆಪಿಸಿಎಲ್ ನ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಕೆಪಿಸಿಎಲ್ ಉಪಾಧ್ಯಕ್ಷರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್, ವ್ಯವಸ್ಥಾಪಕ ನಿರ್ದೇಶಕರಾಗಿರುವ ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಕೆಪಿಸಿಎಲ್ ನಲ್ಲಿ ಸತತ 25 ವರ್ಷ ಕೆಲಸ ಮಾಡಿರುವ  ಸಿಬ್ಬಂದಿ, 25 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದವರು ಮತ್ತು 25 ವರ್ಷದ ಸೇವೆಗೆ ಮುನ್ನವೇ ನಿವೃತ್ತರಾಗಿರುವ ಸಿಬ್ಬಂದಿಯನ್ನು ಗೌರವ ಸ್ಮರಣಿಕೆಗಳೊಂದಿಗೆ ಸನ್ಮಾನಿಸಲಾಗುವುದು. ಅಲ್ಲದೆ, ಎಸ್ಎಸ್ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕೆಪಿಸಿಎಲ್ ಸಿಬ್ಬಂದಿಯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಜತೆಗೆ ಸಂಸ್ಥಾಪನಾ ದಿನದ ಅಂಗವಾಗಿ ಸಿಬ್ಬಂದಿಗೆ ಹಮ್ಮಿಕೊಂಡಿದ್ದ ವಿವಿದ ಕ್ರೀಡಾಕೂಟಗಳಲ್ಲಿ ವಿಜೇತರಾದವರನ್ನು ಗೌರವಿಸಲಾಗುತ್ತದೆ.

ದೇಶದಲ್ಲಿ ವೃತ್ತಿಪರವಾಗಿ ಕಾರ್ಯನಿರ್ವಹಿಸುತ್ತಿರುವ ದೇಶದ ಮೊದಲ ಕಾರ್ಪೋರೇಷನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕೆಪಿಸಿಎಲ್ 1970ರಲ್ಲಿ 746 ಮೆಗಾವ್ಯಾಟ್‍  ಸ್ಥಾಪಿತ ಸಾಮರ್ಥ್ಯದೊಂದಿಗೆ ಆರಂಭವಾಗಿ ಇದೀಗ 9,108.305 ಮೆಗಾ ವ್ಯಾಟ್ ಸ್ಥಾಪಿತ ಸಾಮರ್ಥ್ಯ ಹೊಂದಿದೆ.