ಮನೆ ಕಾನೂನು ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ

ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ

0

ಬೆಂಗಳೂರು: ಕ್ಷಿಪ್ರಗತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಹೆಸರಾಗಿರುವ ಹೈಕೋರ್ಟ್‌ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮಂಗಳವಾರದ ದಿನದ ಕಲಾಪ ದಲ್ಲಿ 503 ಅರ್ಜಿಗಳ ವಿಚಾರಣೆ ನಡೆಸಿದ್ದಾರೆ.

Join Our Whatsapp Group

ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠದ ಕೋರ್ಟ್‌ ಹಾಲ್‌ನಲ್ಲಿ 17ರಲ್ಲಿ ಕಲಾಪ ನಡೆಸುತ್ತಿರುವ ನ್ಯಾ| ನಾಗಪ್ರಸನ್ನ ಅವರು ಕ್ರಿಮಿನಲ್‌ ಅರ್ಜಿಗಳ ವಿಚಾರಣೆ ನಡೆಸುತ್ತಿದ್ದಾರೆ.

ಬೆಳಗ್ಗೆ 10.30ರ ವೇಳೆಗೆ ವಿಚಾರಣೆ ಆರಂಭಿಸಿದ ನ್ಯಾಯ ಮೂರ್ತಿಗಳು ದಿನದ ಕಲಾಪದ ಅವಧಿ ಮುಕ್ತಾಯಗೊಳ್ಳುವ 45 ನಿಮಿಷಗಳ ಮುಂಚಿತವಾಗಿ ಎಲ್ಲ 503 ಅರ್ಜಿಗಳ ವಿಚಾರಣೆಯನ್ನು ಮುಕ್ತಾಯ ಗೊಳಿಸಿದರು.

ಈ ಪೈಕಿ 187 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದ್ದು, 125 ಪ್ರಕರಣಗಳಲ್ಲಿ ಮಧ್ಯಂತರ ಆದೇಶ ನೀಡಲಾಗಿದೆ. ಉಳಿದ ಪ್ರಕರಣಗಳಲ್ಲಿ ವಿಚಾರಣೆ ಮುಂದೂಡಲಾಗಿದೆ.

ನ್ಯಾ| ನಾಗಪ್ರಸನ್ನ ಅವರು 2019ರ ನವೆಂಬರ್‌ 26ರಂದು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡು 2021ರ ಸೆಪ್ಟಂಬರ್‌ 8ರಂದು ಖಾಯಂಗೊಂಡಿದ್ದಾರೆ. 2033ರ ಮಾರ್ಚ್‌ ವೇಳೆಗೆ ನಿವೃತ್ತರಾಗಲಿದ್ದಾರೆ.