ಮನೆ ರಾಜ್ಯ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾ ಗಾಂಧಿ ಭರವಸೆ

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾ ಗಾಂಧಿ ಭರವಸೆ

0

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.

Join Our Whatsapp Group

ಇಲ್ಲಿ ನಡೆದ ಪ್ರಜಾಧ್ವನಿ-2 ಯಾತ್ರೆಯಲ್ಲಿ ಬೃಹತ್ ಜನಸಮಾವೇಶದಲ್ಲಿ ಮಾತನಾಡಿದರು.

ಕಾಡುಗೊಲ್ಲ ಸಮುದಾಯವನ್ನು ST ಪಟ್ಟಿಗೆ ಸೇರಿಸಬೇಕು ಎನ್ನುವ ಬೇಡಿಕೆಗೆ ನಾವು ಸಂಪೂರ್ಣವಾಗಿ ಸ್ಪಂದಿಸಿದ್ದೇವೆ. ಈ ಬಗ್ಗೆ ಕೇಂದ್ರಕ್ಕೂ ಶಿಫಾರಸ್ಸು ಮಾಡಿದ್ದಾಗಿದೆ. ಆದರೆ ಈ ವರೆಗೂ ಇದಕ್ಕೆ ಏಕೆ ಸ್ಪಂದಿಸುತ್ತಿಲ್ಲ ಎಂದು ಸಿಎಂ ಪ್ರಶ್ನಿಸಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ. ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಆಗ್ರಹಕ್ಕೆ ಧ್ವನಿಗೂಡಿಸಿ ಸಹಮತ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಯವರು, ತಮ್ಮ ಭಾಷಣದಲ್ಲೂ ಇದೇ ಮಾತನ್ನು ಪುನರುಚ್ಛರಿಸಿದರು.

ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ ಎಂದು ಭರವಸೆ ನೀಡಿದರು.

ಹಿಂದಿನ ಲೇಖನನೇಹಾ ಹತ್ಯೆ ಪ್ರಕರಣ ಸಿಬಿಐಗೆ ವಹಿಸಿ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ
ಮುಂದಿನ ಲೇಖನಮತದಾನ ನಮ್ಮ ಆದ್ಯ ಕರ್ತವ್ಯ: ಇಒ ಧರಣೇಶ್