ಮನೆ ಸುದ್ದಿ ಜಾಲ ಕೈಗಾ ಅಣು ವಿದ್ಯುತ್ ಸ್ಥಾವರ – ಗೇಟ್‌ ಬಿದ್ದು ಯೋಧ ಸಾವು..!

ಕೈಗಾ ಅಣು ವಿದ್ಯುತ್ ಸ್ಥಾವರ – ಗೇಟ್‌ ಬಿದ್ದು ಯೋಧ ಸಾವು..!

0

ಕಾರವಾರ : ಕೈಗಾ ಅಣು ವಿದ್ಯುತ್ ಸ್ಥಾವರದ ಅಣು ತ್ಯಾಜ್ಯ ಘಟಕದಲ್ಲಿ ಕಾವಲಿಗೆ ನಿಂತಿದ್ದ ಕೇಂದ್ರೀಯ ಕೈಗಾರಿಕೆ ಭದ್ರತಾ ಪಡೆಯ ಹೆಡ್‌ಕಾನ್ಸ್‌ಟೇಬಲ್ ಮೈಮೇಲೆ ಕಬ್ಬಿಣದ ಗೇಟ್ ಬಿದ್ದು ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದ ಮಹಿಮಾನಗಡ್‌ ಮೂಲದ ಶೇಖರ್ ಭೀಮರಾವ್ ಜಗದಾಲೆ (48)‌ ಸಾವಿಗೀಡಾದ ಯೋಧ. ಅವರು ಕಾವಲು ಕಾಯುತಿದ್ದ ವೇಳೆ ಭಾರದ ದೊಡ್ಡ ಗೇಟ್ ತುಂಡಾಗಿ ಮೈಮೇಲೆ ಬಿದ್ದಿತ್ತು. ಪರಿಣಾಮ ಅವರ ತಲೆಗೆ ಗಂಭೀರ ಗಾಯವಾಗಿತ್ತು.

ಅವರನ್ನು ತಕ್ಷಣ ಎಸ್‌ಟಿಎಫ್ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ಕರೆದೊಯ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಕೈಗಾದ ಕೆಜಿಎಸ್ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ. ಈ ಸಂಬಂಧ ಮಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.