ಮನೆ ಸುದ್ದಿ ಜಾಲ ಕಲಬುರಗಿ: ಭಾರೀ ಮಳೆಗೆ ಮನೆ ಗೋಡೆ ಕುಸಿದು 10 ವರ್ಷದ ಬಾಲಕ ಸಾವು

ಕಲಬುರಗಿ: ಭಾರೀ ಮಳೆಗೆ ಮನೆ ಗೋಡೆ ಕುಸಿದು 10 ವರ್ಷದ ಬಾಲಕ ಸಾವು

0

ಕಲಬುರಗಿ: ರಾಜ್ಯದಲ್ಲಿ ಮುಂದುವರಿದಿರುವ ಭಾರೀ ಮಳೆಯ ಕಾರಣದಿಂದಾಗಿ ಮತ್ತೊಂದು ದುರಂತ ಸಂಭವಿಸಿದ್ದು, ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಗುಡೂರು ಗ್ರಾಮದಲ್ಲಿ ಮನೆಯ ಗೋಡೆ ಕುಸಿದು 10 ವರ್ಷದ ಬಾಲಕ ಸಾವಿಗೀಡಾಗಿದ್ದಾನೆ.

ಮೃತ ಬಾಲಕನನ್ನು ಶಿವಪ್ಪ (10) ಎಂದು ಗುರುತಿಸಲಾಗಿದೆ. ಭಾರೀ ಮಳೆಯ ಕಾರಣದಿಂದ ಮನೆಯ ಗೋಡೆ ಕುಸಿದಿದ್ದು, ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇದೇ ವೇಳೆ ಭಾಗ್ಯಮ್ಮ ಎಂಬ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆಯ ಮಾಹಿತಿ ಪಡೆದ ಜೇವರ್ಗಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಆರಂಭಿಸಿದ್ದಾರೆ.