ಕಲಬುರಗಿ: 5ನೇ ತರಗತಿ ಓದುತ್ತಿರುವ 10 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ಎಸಗುವ ಯತ್ನ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಸದ್ಯ ಘಟನೆ ಸಂಬಂಧ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಲೆ ಅವಧಿ ಮುಗಿದ ಬಳಿಕ ವಿದ್ಯಾರ್ಥಿನಿಯನ್ನ ಕರೆಯಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಶಾಲಾ ಕೋಣೆಯಲ್ಲೆ ಶಿಕ್ಷಕ ಮಲ್ಲಿಕಾರ್ಜುನ ಕುಮಸಿ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು ಸದ್ಯ ಕಾಮುಕನ ಹೆಡೆಮುರಿಕಟ್ಟಲಾಗಿದೆ.
Saval TV on YouTube