ಕಲಬುರಗಿ: ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ.
ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಶನಿವಾರ ಬೆಳಗ್ಗೆ ಉಪಹಾರ ಮಾಡಿದ್ದು, ನಂತರ ಏಕಾಏಕಿ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ವಿದ್ಯಾರ್ಥಿನಿಯರನ್ನು ಜೇವರ್ಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫುಡ್ ಪಾಯಿಸನ್ನಿಂದಾಗಿ ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಶಂಕೆ ವ್ಯಕ್ತವಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.