ಕಲಬುರಗಿ: ನಗರದ ಆಜಾದ್ ಪುರ್ ರಸ್ತೆಯಲ್ಲಿ ಸೋಮವಾರ ತಡರಾತ್ರಿ ಯುವಕನೊಬ್ಬನನ್ನು ತಲ್ವಾರ್ ಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಕೊಲೆಯಾಗಿರುವ ಯುವಕನನ್ನು ಉಮೇರ್ (35) ಎಂದು ಗುರುತಿಸಲಾಗಿದ್ದು, ಈತ ಜಿಲಾನಾಬಾದ್ ಪ್ರದೇಶದ ನಿವಾಸಿ ಎಂಬ ಮಾಹಿತಿ ಲಭ್ಯವಾಗಿದೆ.
ವೈಯಕ್ತಿಕ ವಿಚಾರವಾಗಿ ನಡೆದ ಜಗಳದ ಹಿನ್ನೆಲೆಯಲ್ಲಿ ಈ ಕೊಲೆಯಾಗಿದೆ ಎಂದು ಹೇಳಲಾಗುತ್ತಿದೆ. ಆಜಾದಪುರ ರಸ್ತೆಯ ಮನಿಯಾರ್ ಫಂಕ್ಷನ್ ಹಾಲ್ ಮುಂದೆ ಕೊಲೆ ನಡೆದಿದೆ.
ಸ್ಥಳಕ್ಕೆ ಪೊಲೀಸರು ಹಾಗೂ ಪೊಲೀಸ್ ಕಮಿಷನರ್ ಚೇತನ್ ಆರ್ ಹಾಗೂ ಡಿಸಿಪಿ ಅಡೂರು ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
Saval TV on YouTube