ಕಲಬುರಗಿ: ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರ ಎಸಗಿರುವ ಭಯಾನಕ ಕೃತ್ಯ ಕಲಬುರಗಿ ಜಿಲ್ಲೆ ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೆತ್ತವರು ಕೂಲಿಗಾಗಿ ಮುಂಬೈನಲ್ಲಿದ್ದು ಸಂಬಂಧಿಕರ ಮನೆಯಲ್ಲಿದ್ದುಕೊಂಡು ಶಿಕ್ಷಣ ಕಲಿಯುತ್ತಿದ್ದ 10 ವರ್ಷದ ಬಾಲಕಿಗೆ ಚಾಕು ತೋರಿಸಿ ಬೆದರಿಸಿ 14 ಮತ್ತು 16 ವರ್ಷದ ಬಾಲಕರಿಬ್ಬರು ಅತ್ಯಾಚಾರ ಎಸಗಿದ್ದಾರೆ.
ಜೊತೆಗೆ ಈ ಬಾಲಕರು ಅತ್ಯಾಚಾರ ಮಾಡಿ ಪರಸ್ಪರ ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ.
ಕಾಳಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಅಡಿ ಪ್ರಕರಣ ದಾಖಲಾಗಿದೆ.