Saval TV on YouTube
ಕಲಬುರಗಿ(Kalburgi): ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿರುವ ಘಟನೆ ತಾಲೂಕಿನ ಮರಗುತ್ತಿ ಗ್ರಾಮಕ್ಕೆ ಹೊಂದಿಕೊಂಡಿರುವ ಎಂ.ಎಂ.ಗಾರ್ಡನ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.
ಕೊಲೆಯಾದವ ಮಾಲಗತ್ತಿ ನಿವಾಸಿ ಸಚಿನ್ ಬಸವರಾಜ್ ಅಂಬಲಗಿ(35) ಎಂದು ಗುರುತಿಸಲಾಗಿದೆ.
ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಕೊಲೆಗಾರರಿಗಾಗಿ ಹುಡುಕಾಟ ನಡೆದಿದೆ ಎಂದು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ಸಿಪಿಐ ಅರುಣ ಮುರಗೊಂಡಿ ತಿಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗುಲ್ಬರ್ಗಾ ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














