ಮನೆ ಅಪರಾಧ ಕಲಬುರಗಿ: ಕಾಂಗ್ರೆಸ್ ಮುಖಂಡನ ಸಹೋದರನ ಮೇಲೆ ಗುಂಡಿನ ದಾಳಿ- ಆರೋಪಿಗಳು ಪರಾರಿ

ಕಲಬುರಗಿ: ಕಾಂಗ್ರೆಸ್ ಮುಖಂಡನ ಸಹೋದರನ ಮೇಲೆ ಗುಂಡಿನ ದಾಳಿ- ಆರೋಪಿಗಳು ಪರಾರಿ

0

ಕಲಬುರಗಿ(Kalaburgi): ನಗರದ ಆಳಂದ ಚೆಕ್ ಪೋಸ್ಟ್ ಹತ್ತಿರ ಇಂದು ಮಧ್ಯಾಹ್ನ ಜೀಪಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಚೆನ್ನವೀರ ಪಾಟೀಲ ದಣ್ಣೂರ ಎಂಬುವವರ ಮೇಲೆ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಗಾಯಗೊಂಡ ಚನ್ನವೀರ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಸಂತೋಷ ಪಾಟೀಲ ದಣ್ಣೂರ ಅವರ ಸಹೋದರ.

ಬೊಲೆರೊ ವಾಹನದಲ್ಲಿ ಬಂದ ದುಷ್ಕರ್ಮಿಗಳು ಚನ್ನವೀರ ಕೈಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುತ್ತಿದ್ದ ಕೆಡಿಪಿ ಸಭೆಯಲ್ಲಿ ಭಾಗವಹಿಸಿದ್ದ ಡಿಸಿಪಿ ಅಡ್ಡೂರು ಶ್ರೀನಿವಾಸಲು ಘಟನೆಯ ಮಾಹಿತಿ ದೊರೆತ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.